18
May

ಕಳೆದ ಒಂದುವರೆ ತಿಂಗಳಿಗಿಂತಲೂ ಹೆಚ್ಚು ಕಾಲ ರಾಜ್ಯಾದ್ಯಂತ ಲಾಕ್ ಡೌನ್ ನಿಂದಾಗಿ ಜನತೆ ಯಾವುದೇ ಆರ್ಥಿಕ ಸಂಪಾದನೆ ಇಲ್ಲದೆ ತೀರಾ ಕಷ್ಟಕರ ಪರಿಸ್ಥಿತಿಯಲ್ಲಿರುವುದನ್ನು ಸರಕಾರ ಚೆನ್ನಾಗಿ ಅರಿತಿದೆ. ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ ಜನತೆ ಅತ್ಯಂತ ಹೆಚ್ಚಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಕರ್ನಾಟಕ ರಾಜ್ಯ ಸರಕಾರ ಮಾರ್ಚ್ ಏಪ್ರಿಲ್ ಮತ್ತು ಮೇ ತಿಂಗಳುಗಳ ವಿದ್ಯುಚ್ಛಕ್ತಿ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ ಲಾಕ್ ಡೌನ್ ತೆರವುಗೊಂಡ ನಂತರವೂ ಜನರ ಆರ್ಥಿಕತೆ ಒಂದು ಹದಕ್ಕೆ ಬರಲು ಸಾಕಷ್ಟು ಸಮಯ ಹಿಡಿಯುವುದರಿಂದ ಯಾವ ಕಾರಣಕ್ಕೂ ಈ ಮೂರು ತಿಂಗಳಿನ ವಿದ್ಯುಚ್ಛಕ್ತಿ ಶುಲ್ಕವನ್ನು ಸರಕಾರ ವಸೂಲಿ ಮಾಡಬಾರದು. ವಸೂಲಿ ಮಾಡಿದರೆ ಅದು ಜನತೆಯ ಮೇಲೆ ಸರಕಾರ ಹೇರುವ ಬಹುದೊಡ್ಡ ಅನ್ಯಾಯವಾಗಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಸರಕಾರವನ್ನು ಎಚ್ಚರಿಸಿದ್ದಾರೆ.

Leave A Comment