ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.
ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ