ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ
ಬೆಂಗಳೂರು ಆಗಸ್ಟ್ 8: ಶಿವಮೊಗ್ಗ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಈಶ್ವರಪ್ಪ ನಾಲಿಗೆ ಹರಿಯಬಿಟ್ಟು ಹೊಡಿ-ಬಡಿ-ಕೊಲ್ಲು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ ಈಶ್ವರಪ್ಪರನ್ನು ಕೂಡಲೇ ಬಂಧಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆಯನ್ನು ನೀಡಿಯೇ ರಾಜಕೀಯ ಬೇಳೆ ಬೇಯಿಸಿಕೊಂಡು ಬಂದವರು. ಇತ್ತೀಚೆಗೆ ಇವರಿಂದ ನಾಡಿನ ಶಾಂತಿ, ಸೌಹಾರ್ದತೆಗೆ ಭಂಗ ತರುವ ಉದ್ರೇಕಕಾರಿ ಹೇಳಿಕೆಗಳು ಹೆಚ್ಚಾಗುತ್ತಿವೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಉನ್ನತ ವಿಧ್ಯಾಭ್ಯಾಸಕ್ಕೆ ಕಳಿಸಿಕೊಟ್ಟು ಬಡ ಮತ್ತು ಕೆಳವರ್ಗದ ಕಾರ್ಯಕರ್ತರಿಗೆ ಪ್ರಚೋದನೆ ನೀಡಿ ಸಮಾಜಘಾತುಕ ಕೆಲಸಗಳನ್ನು ಮಾಡಿಸುವುದು ನಿರಂತರವಾಗಿ ನಡೆಯುತ್ತಿದೆ. ಬಡ ಕಾರ್ಯಕರ್ತರು ಪೊಲೀಸು, ಕೋರ್ಟ್, ಕೇಸ್ ಗಾಗಿ ಅಲೆದಾಡುತ್ತಾ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಪ್ರಜ್ಞಾವಂತ ಯುವಕರು ಈ ಕೋಮುವಾದಿಗಳ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ಸೌಹಾರ್ದ ಮತ್ತು ಜಾತ್ಯಾತೀತ ಸಮಾಜ ಕಟ್ಟಲು ಎಲ್ಲಾ ಸಮುದಾಯದ ಯುವಕರು ಪ್ರಯತ್ನಿಸಬೇಕು.
ಈಶ್ವರಪ್ಪರನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಬಂಧಿಸಬೇಕೆಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ಡಿಪಿಐ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಅಡ್ವಕೇಟ್ ಮಜೀದ್ ಖಾನ್ ಆಗ್ರಹಿಸಿದ್ದಾರೆ.

Leave A Comment