ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ಪಿ.ಐ ಮುಖಂಡ ಸೈಯದ್ ಸಮೀವುಲ್ಲಾರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ರವರು ಸಂತಾಪ ವ್ಯಕ್ತಪಡಿಸಿದ್ದಾರೆ.ಪಕ್ಷ ಸ್ಥಾಪನೆಯಾದ ದಿನದಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇವರ ವಿಯೋಗದೊಂದಿಗೆ ಪಕ್ಷ ಹಾಗೂ ಸಮುದಾಯವು ನಾಯಕನೊಬ್ಬನನ್ನು ಕಳೆದುಕೊಂಡಂತಾಗಿದೆ. ಮೃತರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸರ್ವಶಕ್ತನಾದ ಅಲ್ಲಾಹನು ಅವರ ಪರಲೋಕ ಜೀವನವನ್ನು ಯಶಸ್ವಿಗೊಳಿಸಲಿ ಹಾಗೂ ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.#RIP
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ