ಸಂವಿಧಾನ ನೀಡಿದ ವೈಯಕ್ತಿಕ ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿದ ಹೈಕೋರ್ಟ್ ತೀರ್ಪು : ಎಸ್ ಡಿಪಿಐ

ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು ಮತ್ತು ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿದ ತೀರ್ಪಿನಲ್ಲಿ ರುಜುವಾತಾಗಿದೆ. ಬಿಜೆಪಿ ಸರಕಾರ ಮುಸ್ಲಿಂ ಅಸ್ತಿತ್ವವನ್ನು ಅಪರಾಧಿ ಯಂತೆ ಬಿಂಬಿಸಿ, ಸಮಾಜದೊಳಗೆ ಸಮಸ್ಯೆಯನ್ನು ಹುಟ್ಟು ಹಾಕಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಕೊನೆಗೆ ಸಂತ್ರಸ್ತರು ನ್ಯಾಯದ ನಿರೀಕ್ಷೆಯಲ್ಲಿ ನ್ಯಾಯಾಲಯದ ಮೊರೆ ಹೋದಾಗ , ನ್ಯಾಯಾಲಯವೂ ರಾಜಕೀಯ ಪ್ರೇರಿತವಾದ ಅಸಂವಿಧಾನಿಕ ತೀರ್ಪನ್ನು ನೀಡಿದೆ. ಇದು ನ್ಯಾಯವ್ಯವಸ್ಥೆಯ ಮೇಲಿರುವ ಅಲ್ಪಸಂಖ್ಯಾತರ ನಂಬಿಕೆಯನ್ನು ನಿರಾಶೆಗೊಳಿಸಿದೆ.ಶಿರವಸ್ತ್ರ ಒಂದು ಸಾಂವಿಧಾನಿಕವಾಗಿರುವ ವೈಯಕ್ತಿಕ ಮತ್ತು ಮೂಲಭೂತ ಹಕ್ಕುಗಳಿಂದ ಕೂಡಿದ ಆಯ್ಕೆಯ ಹಕ್ಕು. ಈ ಹಕ್ಕನ್ನು ನ್ಯಾಯಾಲಯವೇ ಕಸಿಯುತ್ತಿರುವುದು ವಿಷಾದನೀಯ. ಅಗತ್ಯ ಧಾರ್ಮಿಕ ಆಚರಣೆಯ ವಿಚಾರಗಳಲ್ಲಿ ಅಂದರೆ ಶಬರಿ ಮಲೆ ಮಹಿಳಾ ಪ್ರವೇಶ ವಿಚಾರ, ಮುಸ್ಲಿಂ ಹೆಣ್ಣು ಮಕ್ಕಳ ಮಸೀದಿ ಪ್ರವೇಶ ವಿಚಾರ ಮತ್ತು ಪಾರ್ಸಿ ಹೆಣ್ಮಕ್ಕಳ ಅಂತರ್ಜಾತಿ ವಿಚಾರಗಳಲ್ಲಿ ಸರ್ವೋಚ್ಚ ನ್ಯಾಯಾಲಯ ಎಷ್ಟರವರೆಗೆ ಮಧ್ಯ ಪ್ರವೇಶ ಮಾಡಬೇಕು ಅಥವಾ ಇದನ್ನು ಆಯಾ ಧರ್ಮದ ಧಾರ್ಮಿಕ ನಂಬಿಕೆಗಳನ್ನು ಎತ್ತಿ ಹಿಡಿಯಬೇಕಾ ಎಂಬ ವಿಚಾರದಲ್ಲಿ ಒಂದು ಅಂತಿಮ ತೀರ್ಮಾನ ಕೈಗೊಳ್ಳಲು ಬಾಕಿ ಇರುವಾಗಲೇ, ಕರ್ನಾಟಕ ಹೈ ಕೋರ್ಟ್ ಶಿರವಸ್ತ್ರ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲಾ ಎಂದಿರುವುದು ಸಂವಿಧಾನಿಕ ಹಕ್ಕುಗಳ ಮೇಲಿನ ದಾಳಿಯಾಗಿದೆ.2021 /20 22 ರ ಸರಕಾರ ದಾಖಲಾತಿ ನಿಯಮಗಳ ಪ್ರಕಾರ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲಾ ಮತ್ತು ಯಾರಾದರೂ ಅದನ್ನು ಉಲ್ಲಂಘಿಸಿದರೆ ಸರಕಾರ ಕ್ರಮ ಕೈಗೊಲ್ಲುತ್ತದೆ ಎಂದು ಆದೇಶ ಇದ್ದರೂ ಕೂಡ, ಏಕಾಏಕಿ ವಿವಾದವೆಬ್ಬಿಸಿ ತಕ್ಷಣದಲ್ಲೇ ಹೊಸ ಆದೇಶ ಹೊರಡಿಸಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ರಾಜಕೀಯ ಪ್ರೇರಿತ ಆದೇಶ ಎಂಬ ಸಂಶಯಕ್ಕೆ ಹೆಚ್ಚು ಪುಷ್ಠಿಯನ್ನು ನೀಡಿದಂತಾಗಿದೆ.

admin

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

2 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

2 days ago