12 ಆಗಸ್ಟ್ 2021: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರದಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಆಯೋಜಿಸಿದ ರಾಜಕೀಯ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಿದ್ದ ಯುವ ಹೋರಾಟಗಾರರು ಹಾಗೂ ಸಮುದಾಯದ ಮುಖಂಡರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಅಹ್ಮದ್ ಪಕ್ಷದ ತತ್ವಸಿದ್ದಾಂತ ಮತ್ತು ಜನಪರ ರಾಜಕೀಯ ಚಳುವಳಿ ಕುರಿತು ವಿಚಾರ ಮಂಡಿಸಿದರು. ಪಕ್ಷದ ಶಾಲು ಹೊದಿಸಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಸದಸ್ಯರನ್ನು ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಫಯಾಜ್ ಅಹ್ಮದ್, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಮ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಉಮ್ಮರ್ ಫಾರೂಕ್ ಹಾಗೂ ದೊಡ್ಡ ಬಳ್ಳಾಪುರದ ಸ್ಥಳೀಯ ನಾಯಕ ಇಸ್ಮಾಯಿಲ್ ಉಪಸ್ಥಿತರಿದ್ದರು.
#JoinSDPI #SDPIKarnataka
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ