ಬೆಂಗಳೂರಿಗೆ ಆಗಮಿಸಿದ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ಬಿಜೆಪಿ ಸಂಘಪರಿವಾರದ ದುಷ್ಕರ್ಮಿಗಳು ಮಸಿ ಎರಚಿ ಹಲ್ಲೆ ನಡೆಸಲು ಪ್ರಯತ್ನಿಸಿದ್ದನ್ನು ಖಂಡಿಸಿ, ಕೂಡಲೇ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಬೆಂಗಳೂರು ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಪರಾಹ್ನ 4 ಗಂಟೆಗೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ SDPI ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ ಮುಖ್ಯ ಭಾಷಣ ಗೈದರು. ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಂ ಬೆಂಗಳೂರು, ಉಪಾಧ್ಯಕ್ಷರಾದ ರಮೇಶ್ ಕುಮಾರ್ ಹಾಗೂ ಇತರ ಪ್ರಮುಖ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.