Categories: featureNewsPolitics

ವಿಧಾನಸಭಾ ಚುನಾವಣೆ 2023 – ಕ್ಷೇತ್ರ ಸಮೀಕ್ಷೆ ನಡೆಸಿದ SDPI ರಾಷ್ಟ್ರೀಯ ಪ್ರಧಾನರಾಯಚೂರು ಅ 27: ರಾಯಚೂರು ಜಿಲ್ಲೆಗೆ ಭೇಟಿ ನೀಡಿ ಕ್ಷೇತ್ರ ಸಮೀಕ್ಷೆ ನಡೆಸಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ ಹಾಗೂ ರಾಜ್ಯ ಸಮಿತಿ ಸದಸ್ಯ ನೂರುದ್ದೀನ್ ಮೌಲಾನ ರವರನ್ನೊಳಗೊಂಡ ತಂಡ ಆ ಬಳಿಕ ನಗರದ ಸ್ವಾಗತ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ಒಳಾಂಗಣ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಭ್ರಷ್ಟ ರಾಜಕಾರಣಿಗಳಿಂದ ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಪ್ರಮುಖ ಸಮಸ್ಯೆಗಳು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದ್ದು ನೈಜ ಜಾತ್ಯತೀತತೆಯೊಂದಿಗೆ ಪರ್ಯಾಯ ರಾಜಕಾರಣ ಅಗತ್ಯವಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಎಸ್‌ಡಿಪಿಐ ಯನ್ನು ಗೆಲ್ಲಿಸಬೇಕಾಗಿದೆ ಎಂದು ಇಲ್ಯಾಸ್ ಮಹಮ್ಮದ್ ತುಂಬೆ ಯವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತೌಸೀಫ್ ಅಹಮದ್, ಪ್ರಧಾನ ಕಾರ್ಯದರ್ಶಿ ಜಿಲಾನಿ ಪಾಷಾ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

11 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

11 months ago