ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಜಿಲ್ಲಾ ಸಮಿತಿ ಮಾಸಿಕ ಸಭೆ ಜಿಲ್ಲಾ ಅಧ್ಯಕ್ಷರಾದ ಸಲೀಂ ಅವುಟಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ರಿಯಾಜ್ ಕಡಂಬು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ದಿನಾಂಕ 12/11/2022 ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಂಬರಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಲು ಕರೆ ನೀಡಿದರು.
ಸಭೆಯಲ್ಲಿ ಕೈಗೊಂಡ ನಿರ್ಣಯಗಳು:
- ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಜಮಖಂಡಿ ಮತ್ತು ತೇರದಾಳ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಚುಣಾವಣಾ ಕಣಕ್ಕೆ ಇಳಿಸಲು ತೀರ್ಮಾನಿಸಿದ್ದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಅನುಮೋದನೆಗಾಗಿ ಕಳುಹಿಸಲಾಯಿತು.
- ನವೆಂಬರ್ 20 ನೇ ತಾರೀಖಿನಂದು ತೇರದಾಳದ ಹೊಸೂರಿನಲ್ಲಿ “ಒಲವಿನ ಕರ್ನಾಟಕ, ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ” ಎಂಬ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.
ಈ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಯಮುನಪ್ಪ ಗುಣದಾಳ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ ಅಂಬಿ, ರಾಜು ತಾಳಿಕೋಟೆ, ರಾಜಭಕ್ಷ ಜಮಾದಾರ, ತೇರದಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪರಶುರಾಮ ಮೈತ್ರಿ, ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.