ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಾಗಲಕೋಟೆ ಜಿಲ್ಲಾ ಸಮಿತಿ ಮಾಸಿಕ ಸಭೆ ಜಿಲ್ಲಾ ಅಧ್ಯಕ್ಷರಾದ ಸಲೀಂ ಅವುಟಿ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಉಸ್ತುವಾರಿ ರಿಯಾಜ್ ಕಡಂಬು ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರ ಸಮ್ಮುಖದಲ್ಲಿ ದಿನಾಂಕ 12/11/2022 ರಂದು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಪ್ರಾಸ್ತಾವಿಕವಾಗಿ ಮಾತನಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮುಂಬರಲಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಜಿಲ್ಲಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಬೂತ್ ಮಟ್ಟದಲ್ಲಿ ಗಟ್ಟಿಗೊಳಿಸಲು ಕರೆ ನೀಡಿದರು.

ಸಭೆಯಲ್ಲಿ ಕೈಗೊಂಡ ನಿರ್ಣಯಗಳು:

  1. ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಜಮಖಂಡಿ ಮತ್ತು ತೇರದಾಳ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಚುಣಾವಣಾ ಕಣಕ್ಕೆ ಇಳಿಸಲು ತೀರ್ಮಾನಿಸಿದ್ದು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ರಾಜ್ಯ ಸಮಿತಿಗೆ ಅನುಮೋದನೆಗಾಗಿ ಕಳುಹಿಸಲಾಯಿತು.
  2. ನವೆಂಬರ್ 20 ನೇ ತಾರೀಖಿನಂದು ತೇರದಾಳದ ಹೊಸೂರಿನಲ್ಲಿ “ಒಲವಿನ ಕರ್ನಾಟಕ, ಸಮೃದ್ಧ, ಸದೃಢ, ಸ್ವಾಭಿಮಾನಿ ಕರ್ನಾಟಕ ಎಸ್.ಡಿ.ಪಿ.ಐ ಸಂಕಲ್ಪ” ಎಂಬ ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಸನ್ಮಾನ ಮಾಡಲು ತೀರ್ಮಾನಿಸಲಾಯಿತು.

ಈ ಸಭೆಯಲ್ಲಿ ರಾಜ್ಯ ಸಮಿತಿ ಸದಸ್ಯರಾದ ಯಮುನಪ್ಪ ಗುಣದಾಳ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ ಅಂಬಿ, ರಾಜು ತಾಳಿಕೋಟೆ, ರಾಜಭಕ್ಷ ಜಮಾದಾರ, ತೇರದಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಪರಶುರಾಮ ಮೈತ್ರಿ, ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಹಾಗೂ ವಿಧಾನಸಭಾ ಕ್ಷೇತ್ರಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

admin

Recent Posts

ರಾಜ್ಯದ ಕಾಂಗ್ರೆಸ್‌ ಸರಕಾರ ಟಿಪ್ಪು ಜಯಂತಿ ಆಚರಿಸದಂತೆ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿರುವ ಕ್ರಮ ಅತ್ಯಂತ ಖಂಡನೀಯ.

ಕಾಂಗ್ರೆಸ್ ಸರಕಾರ ಟಿಪ್ಪು ಜಯಂತಿ ಆಚರಣೆಯನ್ನು ಘೋಷಿಸುವ ಮೊದಲು ಶ್ರೀರಂಗಪಟ್ಟಣ ಸಹಿತ ರಾಜ್ಯಾದ್ಯಂತ ಟಿಪ್ಪು ಜಯಂತಿಯನ್ನು ರಾಜಾರೋಷವಾಗಿ ಬಹಳ ಸಂಭ್ರಮದಿಂದ…

3 days ago

ರಾಷ್ಟ್ರೀಯ ಶಿಕ್ಷಣ ದಿನ

ನವಂಬರ್ 11 ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಮೌಲಾನಾ ಅಬುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಶಿಕ್ಷಣವೇ ಸಮಾನತೆ, ನ್ಯಾಯ…

3 days ago