ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕೋಮುವಾದಿ ಆಶಯಗಳಿಗೆ ಪೂರಕವಾದ ನಿರ್ಧಾರಗಳನ್ನು ಒಂದೊಂದಾಗಿ ಜಾರಿಗೊಳಿಸುವ ಮೂಲಕ ಮತಗಳನ್ನು ಕ್ರೋಡೀಕರಿಸಲು ಯತ್ನಿಸುತ್ತಿದೆ. ಶಿಕ್ಷಣ ಇಲಾಖೆಯು ಜಾರಿಗೊಳಿಸಿರುವ ಧ್ಯಾನ ಮತ್ತು ವಿವೇಕ ಯೋಜನೆಯಡಿ ಶಾಲಾ ಕೊಠಡಿ ನಿರ್ಮಾಣ ಆದೇಶಗಳೂ ಇದೇ ಮಾದರಿಯಲ್ಲಿದೆ. ಕ್ಲಾಸ್ ರೂಂ ಇಲ್ಲ, ಬುಕ್ ಕೊಡ್ತಿಲ್ಲ, ಬಿಸಿ ಊಟ ಇಲ್ಲ, ಟೀಚರ್ಸ್ ಇಲ್ಲ, ಆ ಬಗ್ಗೆ ಗಮನ ಹರಿಸುವ ಬದಲಾಗಿ ಬಣ್ಣ ಬಳಿಯುತ್ತಾರಂತೆ. ಸರ್ಕಾರದ ಜವಾಬ್ದಾರಿ ಮಕ್ಕಳಿಗೆ ಶಿಕ್ಷಣ ಕೊಡಬೇಕು, ಆದರೆ ಇದರ ಬದಲಾಗಿ ಪಠ್ಯಪುಸ್ತಕವನ್ನು ಕೇಸರೀಕರಣಗೊಳಿಸಿದ್ದು ಆಯಿತು, ಈಗ ಶಾಲಾ ಕಟ್ಟಡ, ಕೊಠಡಿಗಳನ್ನೂ ಕೇಸರಿಮಯಗೊಳಿಸಿ ಪ್ರತಿ ಹಂತದಲ್ಲಿ ಕೇಸರೀಕರಣ ಮಾಡಲು ಮುಂದಾಗಿರುವುದು ಖಂಡನೀಯ.

~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago