2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ಸರ್ಕಾರ ಸಮೀಕ್ಷೆಗಳ ನೆಪದಲ್ಲಿ ಕೆಲವು ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಮತದಾರರ ವೈಯುಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದೆ. ಬೆಂಗಳೂರು ಜಿಲ್ಲೆ ಒಂದರಲ್ಲೆ ಸುಮಾರು ಅರೂವರೆ ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ನಿಯೋಗ ಇಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದೆ. ಅಕ್ರಮದಲ್ಲಿ ಪಾಲ್ಗೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡಿರುವ ಲಕ್ಷಾಂತರ ಮತದಾರರಿಗೆ ನ್ಯಾಯ ಸಿಗುವವರೆಗೂ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬಾರದು ಎಂದು ದೂರು ನೀಡಿ ಮನವಿ ಪತ್ರ ಸಲ್ಲಿಸಲಾಯಿತು.
ನಿಯೋಗದಲ್ಲಿ ,ರಾಷ್ಟ್ರೀಯ ಸಮಿತಿ ಸದಸ್ಯಡಾ. ಮೆಹಬೂಬ್ ಅವದ್ ಷರೀಫ್, ಬೆಂಗಳೂರು ಜಿಲ್ಲಾಧ್ಯಕ್ಷ
ಮುಜಾಯಿದ್ ಪಾಷಾ, ರಾಜ್ಯ ಕೋಶಾಧಿಕಾರಿ ಖಾಲೀದ್ ಯಾದಗಿರಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ