Categories: Uncategorized

ಒಳ ಮೀಸಲಾತಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಗೊಳಿಸಲು SDPI ಆಗ್ರಹಬೆಂಗಳೂರು ಡಿಸೆಂಬರ್ -11;ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಹೋರಾಟ ಗಾರರನ್ನು ಬಂಧಿಸಿದ ಬಿಜೆಪಿ ಸರಕಾರದ ಕ್ರಮ ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ, ನ್ಯಾಯ ಕೊಡುವುದು ಬಿಟ್ಟು ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಇಳಿದಿರುವುದು ಖಂಡನಾರ್ಹ. ಮಾತ್ರವಲ್ಲ 62 ವರ್ಷ ಪ್ರಾಯದ ಹೋರಾಟಗಾರರೊಬ್ಬರ ತಲೆಗೆ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿರುವ ಕೃತ್ಯ ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿರುವ ದರ್ಪವಾಗಿದೆ. ಸರಕಾರ ಕೂಡಲೇ ಹೋರಾಟಗಾರರ ಬೇಡಿಕೆಯನ್ನು ಪರಿಗಣಿಸಬೇಕು ಮತ್ತು ಈ ಕೂಡಲೇ ಬಂಧಿಸಿರುವವರನ್ನು ಬಿಡುಗಡೆಗೊಳಿಸ ಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

1 week ago