12
Dec

ನಿನ್ನೆ ಬೆಂಗಳೂರಿನಲ್ಲಿ ನಡೆದ ಒಳಮೀಸಲಾತಿ ಹೋರಾಟಗಾರರ ಬಂಧನ ಮತ್ತು ಲಾಠಿ ಚಾರ್ಜ್ ಖಂಡಿಸಿ‌, ಬೆಂಗಳೂರಿನಲ್ಲಿ ನಡೆಯುತ್ತಿರುವ ಒಳಮೀಸಲಾತಿ ಹೋರಾಟವನ್ನು ಬೆಂಬಲಿಸಿ, ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಮತ್ತು ಇ.ಡ‌ಬ್ಲ್ಯು.ಎಸ್‌ ಮಸೂದೆ ರೀತಿಯಲ್ಲೇ ಪ್ರಸಕ್ತ ನಡೆಯುತ್ತಿರುವ ಸಂಸತ್ ಚಳಿಗಾಲದ ಅಧಿವೇಶನದಲ್ಲೇ ಒಳಮೀಸಲಾತಿಗಾಗಿ ಸಂವಿಧಾನಕ್ಕೆ ಸೂಕ್ತ ತಿದ್ದುಪಡಿ ಮಸೂದೆಯನ್ನು ಮಂಡಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ಎಸ್‌.ಡಿ.ಪಿ.ಐ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ರಾಷ್ಟ್ರಪತಿಗಳಿಗೆ ಆಗ್ರಹ ಪತ್ರ ರವಾನಿಸಿದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ.

ಈ ಪ್ರತಿಭಟನೆಯಲ್ಲಿ ಎಸ್‌.ಡಿ.ಪಿಐ ಜಿಲ್ಲಾಧ್ಯಕ್ಷರಾದ ಬಾಳೆಕಾಯಿ ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ಕೆ. ಮಹಾಲಿಂಗಪ್ಪ, ಪೌರ ಕಾರ್ಮಿಕರ ಸಂಘದ ಕಾರ್ಯದರ್ಶಿ ಕೆ. ರಾಜಪ್ಪ, ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯ ಅಧ್ಯಕ್ಷರಾದ ಹನುಮಂತಪ್ಪ ದುರ್ಗ, ಟಿಪ್ಪು ಸುಲ್ತಾನ್‌ ಅಭಿಮಾನಿಗಳ ಮಹಾ ವೇದಿಕೆಯ ಅಧ್ಯಕ್ಷರಾದ ಖಾಸಿಂ ಅಲಿ, ಎಸ್‌.ಡಿ.ಪಿ.ಐ ರಾಜ್ಯ ಸಮಿತಿ ಸದಸ್ಯ ಅಕ್ಬರ್ ಅಲಿ ಹಾಗೂ ಇನ್ನಿತರ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Previous Post

Leave A Comment