ದಿನಾಂಕ: 11.12.2022

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷರಾದ ಬಾಳೇಕಾಯಿ ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹೊಳಲ್ಕೆರೆಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಶಶಿಧರ ಹಾಗೂ ಉಪಾಧ್ಯಕ್ಷರಾಗಿ ಆರಿಫ್, ಕಾರ್ಯದರ್ಶಿಯಾಗಿ ಮುಜಾಯಿದ್, ಸಹಕಾರ್ಯದರ್ಶಿಯಾಗಿ ಗುರುಮೂರ್ತಿ, ಕೋಶಾಧಿಕಾರಿಯಾಗಿ ನಿಸಾರ್ ಅಹ್ಮದ್ ಆಯ್ಕೆಯಾದರು.

ಈ ಸಮಾರಂಭದಲ್ಲಿ 80ಕ್ಕೂ ಹೆಚ್ಚು ಯುವಕರು ಮತ್ತು ಹಿರಿಯರು ಎಸ್‌.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಫ್ಸರ್ ಕೂಡ್ಲಿಪೇಟೆಯವರು ಮಾತನಾಡಿ, ಪಕ್ಷದ ಅಗತ್ಯತೆ ಮತ್ತು ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಇನ್ನೋರ್ವ ಅತಿಥಿ ರಾಜ್ಯ ಸಮಿತಿ ಸದಸ್ಯರೂ ಆದ ಯಮನಪ್ಪ ಗುಣದಾಳ ಅವರು ಪಕ್ಷದ ನಿಲುವಿನ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್. ಜಿಲ್ಲಾ ಉಪಾಧ್ಯಕ್ಷರಾದ ಕಮ್ರಾನ್ ಅಲಿ ಉಪಸಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ಕಾರ್ಯದರ್ಶಿಯಾದ ಜಾಕಿರ್ ಹುಸೇನ್ ಅವರು ನೆರವೇರಿಸಿದರು.

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago