ಕರ್ನಾಟಕ ವಿಧಾನಸಭಾ ಚುನಾವಣೆ – 2023ಹಾಸನ ಜಿಲ್ಲಾ ಚುನಾವಣಾ ಪೂರ್ವಭಾವಿ ಸಭೆರಾಜ್ಯ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಫ್ಸರ್ ಕೊಡ್ಲಿಪೇಟೆ ಅವರು ಈ ಕೆಳಗಿನ ಪ್ರಶ್ನೆಗಳನ್ನು ಸಭೆಯ ಮುಂದಿಟ್ಟು ಚರ್ಚೆ ನಡೆಸಿದರು.2023 ಹಾಸನ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ರೇಸ್ ನಲ್ಲಿ ಒಬ್ಬೇ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಅಭ್ಯರ್ಥಿಯ ಹೆಸರಿದೆಯೇ? ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಬಂದ ನಂತರ ಅಲ್ಪಸಂಖ್ಯಾತರು ಕೇವಲ ಓಟ್ ಬ್ಯಾಂಕ್ ಆಗಿ ಮಾತ್ರ ಬಳಕೆಯಾಗಿರುವುದು ನಿಜವಲ್ಲವೇ? ಸ್ವಾಭಿಮಾನದ ರಾಜಕಾರಣಕ್ಕಾಗಿ ಎಸ್.ಡಿ.ಪಿ.ಐ ಪಕ್ಷ ಈ ಬಾರಿ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಸಮುದಾಯದ ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ ಇದು ಸರಿಯೇ? ಹಾಗೇನಾದರೂ ಆದಲ್ಲಿ ಈ ಬಾರಿ ಹಾಸನ ಕ್ಷೇತ್ರದಲ್ಲಿ ಸಕಾರಾತ್ಮಕ ರಾಜಕಾರಣದ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಇದೆಯೇ? ಅಲ್ಪಸಂಖ್ಯಾತ, ದಲಿತ ಮತದಾರರು ಎಚ್ಚರಗೊಳ್ಳುವರೇ?