ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಡಿ.ಪಿ.ಐ ಚುನಾವಣಾ ಪೂರ್ವ ಸಭೆ ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ತಂತ್ರ ಹಾಗೂ ಯೋಜನೆಗಳ ಬಗ್ಗೆ ಸಭೆ ನಡೆಸಲಾಯಿತು. ಸಭೆಯಲ್ಲಿ ಸಭೆಯಲ್ಲಿ ಮುಂದಿನ ಚುನಾವಣೆಯ ವರೆಗೆ ನಿರ್ವಾಹಣೆ ಮಾಡಲು ಚುನಾವಣಾ ಸಮಿತಿಯನ್ನು ರಚಿಸಿ ಮಾತನಾಡಿದ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು 2023 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಚಿತ್ರದುರ್ಗ ವಿಧಾನಸಭಾ ಅಭ್ಯರ್ಥಿಯಾಗಿ ಬಾಳೆಕಾಯಿ ಶ್ರೀನಿವಾಸ್ ಅವರನ್ನು ಕಣಕ್ಕೆ ಇಳಿಸಿದೆ. ಚಿತ್ರದುರ್ಗ ನಗರದಲ್ಲಿ ಸುಮಾರು 26 ಘೋಷಿತ ಸ್ಲಂಗಳಿವೆ ಇದರಲ್ಲಿ ಹಕ್ಕು ಪತ್ರ ವಿತರಣೆಯಲ್ಲಿ ರಾಜಕೀಯ ಮಧ್ಯ ಪ್ರವೇಶಿಸಿ ಹಕ್ಕುಪತ್ರ ವಿತರಣೆಯನ್ನು ಅರ್ಧಕ್ಕೆ ನಿಂತಿದೆ ಮತ್ತು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರಿಯಾದ ಜಿಲ್ಲಾ ಆಸ್ಪತ್ರೆಯಿಲ್ಲ, ಇಲ್ಲಿನ ಜನರ ಸಂಕಷ್ಟಗಳಿಗೆ ಕಿವಿ ಕೊಡುವವರೇ ಇಲ್ಲದಂತಾಗಿ ಇಲ್ಲಿ ಹತ್ತು ಹಲವು ಸಮಸ್ಯೆಗಳು ತಾಂಡವವಾಡುತ್ತಿದೆ. ಹಾಗಾಗಿ ಕ್ಷೇತ್ರದ ಜನತೆ ಎಸ್.ಡಿ.ಪಿ.ಐ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವ ಮೂಲಕ ತಮ್ಮ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಜನಪರ ಕಾಳಜಿ ಹೊಂದಿರುವ ಎಸ್.ಡಿ.ಪಿ.ಐ ಅಭ್ಯರ್ಥಿಯನ್ನು ಬೆಂಬಲಿಸುವ ಭರವಸೆ ಇದೆ, ಈ ನಿಟ್ಟಿನಲ್ಲಿ ಇಲ್ಲಿನ ಎಲ್ಲ ಸಮಸ್ಯೆಗಳ ಕುರಿತು ಜನರಿಗೆ ಮನವರರಿಕೆ ಮಾಡಿಸಲು ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡಲು ಪಣ ತೊಡಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ, ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ಬಾಳೆಕಾಯಿ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಜನವರಿ.13.2023
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಎಸ್.ಡಿ.ಪಿ.ಐ ಚುನಾವಣಾ ಪೂರ್ವ ಸಭೆ<br>ಚಿತ್ರದುರ್ಗ: ಕರ್ನಾಟಕ ವಿಧಾನಸಭಾ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಚುನಾವಣಾ ತಂತ್ರ ಹಾಗೂ ಯೋಜನೆಗಳ ಬಗ್ಗೆ ಸಭೆ ನಡೆಸಲಾಯಿತು.<br>ಸಭೆಯಲ್ಲಿ ಸಭೆಯಲ್ಲಿ ಮುಂದಿನ ಚುನಾವಣೆಯ ವರೆಗೆ ನಿರ್ವಾಹಣೆ ಮಾಡಲು ಚುನಾವಣಾ ಸಮಿತಿಯನ್ನು ರಚಿಸಿ ಮಾತನಾಡಿದ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು 2023 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಚಿತ್ರದುರ್ಗ ವಿಧಾನಸಭಾ ಅಭ್ಯರ್ಥಿಯಾಗಿ ಬಾಳೆಕಾಯಿ ಶ್ರೀನಿವಾಸ್ ಅವರನ್ನು ಕಣಕ್ಕೆ ಇಳಿಸಿದೆ. ಚಿತ್ರದುರ್ಗ ನಗರದಲ್ಲಿ ಸುಮಾರು 26 ಘೋಷಿತ ಸ್ಲಂಗಳಿವೆ ಇದರಲ್ಲಿ ಹಕ್ಕು ಪತ್ರ ವಿತರಣೆಯಲ್ಲಿ ರಾಜಕೀಯ ಮಧ್ಯ ಪ್ರವೇಶಿಸಿ ಹಕ್ಕುಪತ್ರ ವಿತರಣೆಯನ್ನು ಅರ್ಧಕ್ಕೆ ನಿಂತಿದೆ ಮತ್ತು ಚಿತ್ರದುರ್ಗ ಜಿಲ್ಲಾ ಕೇಂದ್ರದಲ್ಲಿ ಸರಿಯಾದ ಜಿಲ್ಲಾ ಆಸ್ಪತ್ರೆಯಿಲ್ಲ, ಇಲ್ಲಿನ ಜನರ ಸಂಕಷ್ಟಗಳಿಗೆ ಕಿವಿ ಕೊಡುವವರೇ ಇಲ್ಲದಂತಾಗಿ ಇಲ್ಲಿ ಹತ್ತು ಹಲವು ಸಮಸ್ಯೆಗಳು ತಾಂಡವವಾಡುತ್ತಿದೆ. ಹಾಗಾಗಿ ಕ್ಷೇತ್ರದ ಜನತೆ ಎಸ್.ಡಿ.ಪಿ.ಐ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವ ಮೂಲಕ ತಮ್ಮ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ಜನಪರ ಕಾಳಜಿ ಹೊಂದಿರುವ ಎಸ್.ಡಿ.ಪಿ.ಐ ಅಭ್ಯರ್ಥಿಯನ್ನು ಬೆಂಬಲಿಸುವ ಭರವಸೆ ಇದೆ, ಈ ನಿಟ್ಟಿನಲ್ಲಿ ಇಲ್ಲಿನ ಎಲ್ಲ ಸಮಸ್ಯೆಗಳ ಕುರಿತು ಜನರಿಗೆ ಮನವರರಿಕೆ ಮಾಡಿಸಲು ಕಾರ್ಯಕರ್ತರು ತಳಮಟ್ಟದಲ್ಲಿ ಕೆಲಸ ಮಾಡಲು ಪಣ ತೊಡಬೇಕು ಎಂದು ಕರೆ ನೀಡಿದರು.<br>ಸಭೆಯಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ, ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ಜಿಲ್ಲಾಧ್ಯಕ್ಷರಾದ ಶ್ರೀನಿವಾಸ್ ಬಾಳೆಕಾಯಿ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.<br>ಜನವರಿ.13.2023