Categories: featureNewsPolitics

ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಗೆ ರಾಜ್ಯ ನಾಯಕರ ಭೇಟಿ.ದಾವಣಗೆರೆ: ಎಸ್.ಡಿ.ಪಿ.ಐ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆಯು ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ರವರ ಸಮ್ಮುಖದಲ್ಲಿ ದಾವಣಗೆರೆಯಲ್ಲಿ ಜರುಗಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಅಫ್ಸರ್ ಕೊಡ್ಲಿಪೇಟೆ ಹಾಲಿ ಕ್ಷೇತ್ರದ ಶಾಸಕರು ಚುನಾವಣೆ ಬಂದಾಗ ಮಾತ್ರ ಕ್ಷೇತ್ರಕ್ಕೆ ಭೇಟಿ ಕೊಡುತ್ತಾರೆ, ಕಳೆದ 25 ವರ್ಷಗಳಿಂದ ಶಾಸಕರಾಗಿ ಜನರ ಕಷ್ಟಗಳಿಗೆ ಸ್ಪಂದಿಸದೆ ಮತದಾರರಿಗೆ ಮೋಸ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಇವರ ಕೂಡುಗೆಯೇನು? ಕ್ಷೇತ್ರದಲ್ಲಿ ಸರಿಯಾದ ಒಂದು ಸಾರ್ವಜನಿಕ ಆಸ್ಪತ್ರೆ ಇಲ್ಲದ ಕಾರಣ ಬಡತನ ರೇಖೆಗಿಂತ ಕೆಳಗೆ ಇರುವ ಇಲ್ಲಿನ ಜನರು ಚಿಕಿತ್ಸೆಗಾಗಿ ಪರಿದಾಡುವ ಪರಿಸ್ಥಿತಿ ಇದೆ. ಪ್ರತಿ ಬಾರಿ ಚುನಾವಣೆ ಬಂದಾಗ ವಸತಿಗೃಹ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿ ಹೆಗಡೆ ನಗರ ನಿವಾಸಿಗಳನ್ನು ಕೇವಲ ಮತ ಬ್ಯಾಂಕ್ ಆಗಿ ಉಪಯೋಗಿಸಲಾಗುತ್ತಿದೆ, ಇವರಿಗೆ ಇಲ್ಲಿಯವರೆಗೆ ಶಾಶ್ವತ ವಸತಿಗೃಹ ನಿರ್ಮಾಣ ಮಾಡಿಕೊಡಲು ಇಲ್ಲಿನ ಶಾಸಕರಿಗೆ ಸಾಧ್ಯವಾಗಲಿಲ್ಲ. ಪೌರಕಾರ್ಮಿಕರನ್ನು ಖಾಯಂ ಗೊಳಿಸುವುದಾಗಲಿ, ಅವರಿಗೆ ಶಾಶ್ವತ ವಸತಿಗೃಹ ವ್ಯವಸ್ಥೆಯಾಗಲಿ ಹಾಗೂ ಕನಿಷ್ಟಪಕ್ಷ ಅವರ ಸಂಕಷ್ಟಗಳನ್ನು ಆಲಿಸಲೂ ಇಲ್ಲಿನ ಶಾಸಕರು ತಯಾರಿಲ್ಲ. ಇವರು ಚುನಾವಣೆಗಳಲ್ಲಿ ಆಶ್ವಾಸನೆ ನೀಡಿದಂತೆ ಮಂಡಕ್ಕಿ ಬಟ್ಟಿಗಳಿಗೆ ಆಧುನಿಕ ತಂತ್ರಜ್ಞಾನ ಅಳವಡಿಸಿ ಅಭಿವೃದ್ಧಿ ಮಾಡುವ ಮನಸ್ಸೇ ಮಾಡಲಿಲ್ಲ. ಮಂಡಕ್ಕಿ ಬಟ್ಟಿ ಕಾರ್ಮಿಕರಿಗೆ ಶಾಶ್ವತ ಮನೆ ಇಲ್ಲದ ಕಾರಣ ಬರುವ ಅಲ್ಪಸ್ವಲ್ಪ ಕೂಲಿಯಲ್ಲಿ ಜೀವನ ನಡೆಸುವುದು ಅವರಿಗೆ ಕಷ್ಟವಾಗಿದೆ ಮತ್ತು ಇವರ ಪರಿಸ್ಥಿತಿ ನಿಜಕ್ಕೂ ಶೋಚನೀಯವಾಗಿದೆ. ಕಾರ್ಮಿಕರಿಗಾಗಿ ಲೇವಟ್ ಮಾಡಿ ಮನೆ ನಿರ್ಮಿಸಿ ಕೊಡುವ ಆಶ್ವಾಸನೆ ನೀಡಿ ಅದು ಇಲ್ಲಿಯವರೆಗೆ ಈಡೇರಲಿಲ್ಲ, ಆಶ್ವಾಸನೆಗಳು ಕೇವಲ ಆಶ್ವಾಸನೆಗಳಾಗಿ ಮಾತ್ರ ಉಳಿದಿವೆ.ಕ್ಷೇತ್ರದಲ್ಲಿ ಇಂತಹ ಹತ್ತು ಹಲವು ಸಮಸ್ಯೆಗಳು ತಾಂಡವವಾಡುತ್ತಿವೆ ಈ ಬಗ್ಗೆ ಕಾರ್ಯಕರ್ತರು ಕ್ಷೇತ್ರದ ಜನತೆಗೆ ಎಳೆ ಎಳೆಯಾಗಿ ತಿಳಿಹೇಳಬೇಕು ಮತ್ತು ಪರ್ಯಾಯ ರಾಜಕೀಯ ವ್ಯವಸ್ಥೆಗೆ ಎಸ್.ಡಿ.ಪಿ.ಐ ಪಕ್ಷದ ಅನಿವಾರ್ಯತೆಯ ಕುರಿತು ಜನರಿಗೆ ಮನವರಿಕೆ ಮಾಡುವ ಮೂಲಕ ದಾವಣಗೆರೆಯಲ್ಲಿ ಈಗಾಗಲೇ ಘೋಷಣೆ ಮಾಡಿರುವ ನಮ್ಮ ಅಭ್ಯರ್ಥಿ ಇಸ್ಮಾಯಿಲ್ ಜಬಿವುಲ್ಲಾ ಅವರನ್ನು ಗೆಲ್ಲಿಸುವ ಪ್ರಯತ್ನವನ್ನು ಮಾಡಬೇಕು, ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಕರೆಕೊಟ್ಟರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಜಿಲ್ಲಾಧ್ಯಕ್ಷರು ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಸ್ಮಾಯಿಲ್ ಜಬಿವುಲ್ಲಾ , ಪ್ರಧಾನ ಕಾರ್ಯದರ್ಶಿ ಸೈಯದ್ ಅಶ್ಫಾಕ್ , ಉಪಾಧ್ಯಕ್ಷರಾದ ರಜ್ವೀ ರಿಯಾಜ್ ಅಹಮದ್ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಜನವರಿ 14.01.2023

admin

Recent Posts

حیدر آباد - بنگلور ہائی وے پر بنگلور کی طرف سفر کر رہی ایک بس…

22 hours ago

Hyderabad - Bangalore highway par Bangalore ki taraf safar kar rahi aik bus Andhra Pradesh…

22 hours ago

ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ಬೆಂಗಳೂರಿನತ್ತ ಪ್ರಯಾಣಿಸುತ್ತಿದ್ದ ಬಸ್ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಕೋಟೆ ಬಳಿ ಬೆಂಕಿಗಾಹುತಿಯಾಗಿ, ಮಕ್ಕಳನ್ನು ಒಳಗೊಂಡು…

22 hours ago

🌟 Tribute to Dr. A.P.J. Abdul Kalam 🌟

Remembering Dr. A.P.J. Abdul Kalam, former President of India and the Missile Man of India,…

1 week ago

ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ.…

2 weeks ago