Categories: featureNewsPolitics

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪುಲಿಕೇಶಿನಗರದ ಅಭ್ಯರ್ಥಿ ಬಿ.ಆರ್. ಭಾಸ್ಕರ್ ಪ್ರಸಾದ್ ನೇತೃತ್ವದ ನಿಯೋಗ ಜನವರಿ 27, 2023ರಂದು ಈ ಕೆಳಗಿನ ಎರಡು ಮನವಿಗಳನ್ನು ಮಾಡಿಕೊಂಡಿದ್ದಾರೆ.ಏಪ್ರಿಲ್ 14 ಅಂಬೇಡ್ಕರ್ ಜಯಂತಿ, ದೇಶದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ‌ ಅವರ ಜಯಂತಿ ಆಚರಣೆಗೆ ಯಾವುದೇ ನೀತಿ ಸಂಹಿತೆ ತೊಡಕಾಗದಂತೆ ಚುನಾವಣಾ ದಿನಾಂಕಗಳ ಘೋಷಣೆಯನ್ನು ಅಂಬೇಡ್ಕರ್ ಜಯಂತಿಯ ನಂತರ ಘೋಷಣೆ ಮಾಡಬೇಕು.ಚುನಾವಣೆ ಸಂದರ್ಭದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಒದಗಿಸಲು ಕರ್ನಾಟಕದಲ್ಲಿ ಚುನಾವಣೆಗಳನ್ನು ಎರಡು ಹಂತಗಳಲ್ಲಿ ನಡೆಸಬೇಕು.ಮನವಿ ಸ್ವೀಕರಿಸಿದ ಮೀನಾ ಅವರು, ಭಾರತದ ಮುಖ್ಯ ಚುನಾವಣಾಧಿಕಾರಿಗಳು ಚುನಾವಣೆಗೂ ಮುನ್ನ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಆ ಸಂದರ್ಭದಲ್ಲಿ ಎಲ್ಲರ ಕಡೆಯಿಂದ ಈ ಮನವಿ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ನಿಯೋಗದಲ್ಲಿ ಪಕ್ಷದ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮುಜಾಹಿದ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಲೀಮ್, ಜಿಲ್ಲಾ ಕಾರ್ಯದರ್ಶಿ ಎಂ.ಕೆ. ಮೇತ್ರಿ ಅವರು ಉಪಸ್ಥಿತರಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

admin

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

4 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

4 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

4 days ago