ಪತ್ರಿಕಾ ಗೋಷ್ಠಿ
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ನಂಜುಡಪ್ಪ ವರದಿಯ ಅನುಷ್ಠಾನ ವಿಚಾರದಲ್ಲಿ ಈವರೆಗಿನ ಯಾವ ಸರ್ಕಾರವೂ ಬದ್ಧತೆಯಿಂದ ಕಾರ್ಯನಿರ್ವಹಿಸಿಲ್ಲ: ಅಫ್ಸರ್ ಕೊಡ್ಲಿಪೇಟೆ ಆರೋಪ
ಗುಲ್ಬರ್ಗ 6, ಫೆಬ್ರವರಿ 2023, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ 2023 ರ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಗುಲ್ಬರ್ಗ ಜಿಲ್ಲೆಯ ಗುಲ್ಬರ್ಗ ಉತ್ತರ, ಗುಲ್ಬರ್ಗ ದಕ್ಷಿಣ, ಗುಲ್ಬರ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಪರ್ ಕೋಡ್ಲಿಪೇಟೆಯವರು ಪತ್ರಿಕಾಗೋಷ್ಠಿಯ ತಿಳಿಸಿದ್ದಾರೆ.
ಈ ಬಾರಿಯ ಚುನಾವಣೆಗೆ ಎಸ್‌ಡಿಪಿಐ ಪಕ್ಷದ ಪ್ರಥಮ ಪಟ್ಟಿಯ ಮೂಲಕ ಹತ್ತು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳನ್ನು ಅಂತಿಮಗೊಳಿಸಿ ಘೋಷಿಸಲಾಗಿದೆ. ಅದರ ಜೊತೆಗೆ ಪಕ್ಷ ಸ್ಪರ್ಧಿಸಲಿರುವ ಇನ್ನೂ 44 ಕ್ಷೇತ್ರಗಳ ಮೊದಲ ಪಟ್ಟಿಯನ್ನೂ ಕೂಡ ಜನವರಿ ತಿಂಗಳು 7ನೇ ತಾರೀಖು ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ. ಫೈಝಿ ಅವರು ಘೋಷಣೆ ಮಾಡಿದ್ದಾರೆ. ಈ ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಗತಿಯಲ್ಲಿದೆ ಎಂದು ಅವರು ಈ ಸಂದರ್ಭದಲ್ಲಿ ತಿಳಿಸಿದರು.
ಇಲ್ಲಿಯವರೆಗೆ ಆಡಳಿತ ನಡೆಸಿದ ಯಾವುದೇ ಪಕ್ಷದ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಯಾವುದೇ ರೀತಿಯಾದ ಪ್ರಾಧಾನ್ಯತೆ ಕೊಟ್ಟಿಲ್ಲ.
ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ ಜಾರಿಗೆ ಬಂದ 371ಜೆ ಕಲಂನಡಿ ಈ ವರೆಗೆ ಶೈಕ್ಷಣಿಕವಾಗಿ ಉತ್ತಮ ಅವಕಾಶ ದೊರೆತಿದ್ದರೂ ಉದ್ಯೋಗ ಅವಕಾಶ, ಮುಂಬಡ್ತಿ ವಿಷಯದಲ್ಲಿ ಅನ್ಯಾಯವಾಗುತ್ತಿದ್ದು ಸರಕಾರ ಸಮರ್ಪಕವಾಗಿ ಕಲಂ ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು.
ಈ ಪ್ರದೇಶದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಈ ಸರ್ಕಾರ ಹೇಳಿತ್ತು. ಆದರೆ, ಮಾತಿನಂತೆ ನಡೆದುಕೊಂಡಿಲ್ಲ. ತಿದ್ದುಪಡಿಯ ಪ್ರಕಾರ ನೇಮಕಾತಿಯಲ್ಲಿ ಅಭ್ಯರ್ಥಿಗಳಿಗೆ ಮೀಸಲಾತಿ ಸಿಗುತ್ತಿಲ್ಲ. ಶಿಕ್ಷಕರು, ಕಂಪ್ಯೂಟರ್ ಆಪರೇಟರ್‌ಗಳು, ಚಾಲಕ ಕಮ್ ನಿರ್ವಾಹಕ, ನ್ಯಾಯಾಧೀಶರ ನೇಮಕಾತಿಯಲ್ಲಿ ಮೀಸಲು ಸಿಗುತ್ತಿಲ್ಲ. ಆದ್ದರಿಂದ 371(ಜೆ) ಕಲಂ ತಿದ್ದುಪಡಿ ಅನ್ವಯ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿಯ ಸಮರ್ಪಕ ಅನುಷ್ಠಾನ ಕುರಿತು ನಿಗಾ ವಹಿಸಲು ಪ್ರತ್ಯೇಕ ಸಚಿವಾಲಯ ತೆರೆಯಬೇಕು. ಸರ್ಕಾರ ವಾರ್ಷಿಕ ₹1,500 ಕೋಟಿ ಒದಗಿಸಿದರೂ ಜನಪ್ರತಿನಿಧಿಗಳು, ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಕಾಳಜಿ ವಹಿಸುತ್ತಿಲ್ಲ. ಹೀಗಾಗಿ ಸಚಿವರೊಬ್ಬರನ್ನು ನೇಮಿಸಬೇಕು, ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಲ್ಲಿ ವಿಶೇಷ ನಿಗಾ ಘಟಕ ಸ್ಥಾಪಿಸಬೇಕು ಎಂದು ಅವರು ಆಗ್ರಹಿಸುತ್ತಾ, ಇದು ವಿಶೇಷ ಸ್ಥಾನಮಾನದ ಸಮರ್ಪಕ ಅನುಷ್ಠಾನದ ದೃಷ್ಟಿಯಿಂದ ಒಳ್ಳೆಯದು.
ಅದೇ ರೀತಿ ಗುಲ್ಬರ್ಗ ಜಿಲ್ಲೆ ಸಮಸ್ಯೆಗಳ ಅಗರವಾಗಿದೆ. ಇಲ್ಲಿನ ಜನ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಬಗೆಹರಿಸುವ ಅಥವಾ ಅದಕ್ಕೆ ಪರ್ಯಾಯ ಮಾರ್ಗವನ್ನು ಸೂಚಿಸುವವರು ಯಾರು ಇಲ್ಲವಾಗಿದ್ದಾರೆ. ಗುಲ್ಬರ್ಗ ಜಿಲ್ಲೆಯ ರಾಜಕಾರಣಿಗಳು ಜನರ ಸಮಸ್ಯೆಗಳನ್ನು ಬಗೆಹರಿಸುವ ಬದಲು ತಮ್ಮ ರಾಜಕೀಯ ಭದ್ರತೆಯನ್ನು ಕಾಪಾಡಿಕೊಳ್ಳುವ ಭರದಲ್ಲಿದ್ದಾರೆ, ಸಾರ್ವಜನಿಕರ ಸಮಸ್ಯೆಗೆ ಯಾವುದೇ ಸ್ಪಂದನದ ಕುರುಹುಗಳಿಲ್ಲ ಎಂದು ಅವರು ಆರೋಪಿಸಿದರು.
ಕಳೆದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 3 ಸಾವಿರ ಕೋಟಿ ಅನುದಾನ ನೀಡುವುದಾಗಿ ಘೋಷಿಸಲಾಗಿತ್ತು. ಇದರಲ್ಲಿ 1500 ಕೋಟಿ ಅನುದಾನ ಮೈಕ್ರೋ ಯೋಜನೆಗೆ ಹಾಗೂ ಉನ್ನುಳಿದ 1500 ಕೋಟಿ ಅನುದಾನವನ್ನು ಈ ಭಾಗದ ಶಿಕ್ಷಣ, ಉದ್ಯೋಗ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಬಳಸಲಾಗುವುದು ಎಂದು ಸರ್ಕಾರ ಹೇಳಿತ್ತು. ಅಲ್ಲದೆ, ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಡಾ. ಡಿ.ಎಂ. ನಂಜುಂಡಪ್ಪ ವರದಿ ಅನುಷ್ಠಾನದ ವಿಶೇಷ ಯೋಜನೆಗೆ 3 ಸಾವಿರ ಕೋಟಿ ಮೀಸಲಿಟ್ಟಿತ್ತು. ಕರ್ನಾಟಕ ಸರ್ಕಾರ ರಾಜ್ಯದ ಬಜೆಟ್‌ನಲ್ಲಿ ಮೀಸಲಿಟ್ಟಿರುವ ಅನುದಾನವನ್ನು ವಲಯವಾರು ಹಂಚಿಕೆ ಮಾಡುವಾಗ ವಿಶೇಷ ಅಭಿವೃದ್ಧಿ ಯೋಜನೆಯ 1 ಸಾವಿರ ಕೋಟಿ ಅನುದಾನವನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ವರ್ಗಾಯಿಸಿ, ಬಜೆಟ್‌ನಲ್ಲಿ ಹೇಳಿರುವಂತೆ ಮಂಡಳಿಗೆ 3 ಸಾವಿರ ಕೋಟಿ ಬದಲಾಗಿ ಕೇವಲ 2 ಸಾವಿರ ಕೋಟಿ ಅನುದಾನವನ್ನು ಹಂಚಿಕೆ ಮಾಡಲಾಗಿದೆ. ಆದರೆ, ವಿಶೇಷ ಅಭಿವೃದ್ಧಿ ಯೋಜನೆಯ 3 ಸಾವಿರ ಕೋಟಿ ಅನುದಾನದಲ್ಲಿ 1200 ಕೋಟಿ ಕಲ್ಯಾಣ ಕರ್ನಾಟಕದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಬಳಕೆ ಮಾಡಬೇಕಿತ್ತು. ಆದರೆ, ಆ ಅನುದಾನವನ್ನು ಮಂಡಳಿಗೆ ವರ್ಗಾವಣೆ ಮಾಡಿರುವುದರಿಂದ ಸರ್ಕಾರವು ಮಂಡಳಿಗೂ ವಂಚಿಸಿದೆ. ಅಷ್ಟೇ ಅಲ್ಲದೆ, ವಿಶೇಷ ಅಭಿವೃದ್ಧಿ ಯೋಜನೆಯ ಮೂಲ ಉದ್ದೇಶಕ್ಕೂ ಅನ್ಯಾಯ ಮಾಡಲಾಗಿದೆ ಎಂದು ಅಫ್ಸರ್ ಆರೋಪಿಸಿದರು.
ನಂಜುಡಪ್ಪ ವರದಿಯ ಅನುಷ್ಠಾನ ವಿಚಾರದಲ್ಲಿ ಈವರೆಗಿನ ಯಾವುದೇ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸಿಲ್ಲ. ಹೀಗಾಗಿ, ರಾಜ್ಯದಲ್ಲಿ 39ರಷ್ಟಿದ್ದ ಅತ್ಯಂತ ಹಿಂದುಳಿದ ತಾಲೂಕುಗಳ ಸಂಖ್ಯೆ ಈಗ 40ಕ್ಕೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21 ರಷ್ಟಿದ್ದ ಅತ್ಯಂತ ಹಿಂದುಳಿದ ತಾಲೂಕುಗಳ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಎಂದು ಸಿಎಂಡಿಆರ್ ಸಂಸ್ಥೆ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಅಫ್ಸರ್ ಕೊಡ್ಲಿಪೇಟೆ ಹೇಳಿದರು.
ಇಲ್ಲಿನ ಬಹು ಮುಖ್ಯವಾದ ಕೆಲವು ಸಮಸ್ಯೆಗಳು
ಈ ಜಿಲ್ಲೆಯಿಂದ ಗೆದ್ದ ರಾಜಕಾರಣಿಗಳು ಇಲ್ಲಿನ ಯಾವುದೇ ಸಮಸ್ಯೆಗಳಿಗೂ ಸ್ಪಂದಿಸದೆ ನೋಡಿಯೂ ನೋಡದ ಹಾಗೆ, ಕೇಳಿಯೂ ಕೇಳದ ಹಾಗೆ ತಮ್ಮ ರಾಜಕೀಯ ಭದ್ರತೆಯನ್ನು ನೋಡಿಕೊಳ್ಳುವಲ್ಲಿ ನಿರತರಾಗಿದ್ದಾರೆ. ಸೂಕ್ತ ಪರ್ಯಾಯಕ್ಕೆ ಹವಣಿಸುತ್ತಿದ್ದರೆ ಎಂದು ಅವರು ಹೇಳಿದರು.
ಎಸ್‌ಡಿಪಿಐ ಪಕ್ಷ ಕಳೆದ 13 ವರ್ಷಗಳಿಂದ ದೇಶದ 15 ರಾಜ್ಯಗಳಲ್ಲಿ ಸಕ್ರಿಯವಾಗಿ ಚುನಾವಣೆ ಮತ್ತು ಹೋರಾಟಗಳಲ್ಲಿ ತೊಡಗಿಸಿಕೊಂಡಿದೆ. ಕರ್ನಾಟಕದಲ್ಲಿ ಪಕ್ಷದ ಅಭ್ಯರ್ಥಿಗಳು 300ಕ್ಕೂ ಹೆಚ್ಚು ಕಾರ್ಪೊರೇಟರ್, ಕೌನ್ಸಿಲ್ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಗೆದ್ದಿದ್ದಾರೆ. ಪಕ್ಷ 20ಕ್ಕೂ ಹೆಚ್ಚು ಸ್ಥಳೀಯ ಸಂಸ್ಥೆಗಳಲ್ಲಿ ಬೇರೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿದೆ ಮತ್ತು ಕೆಲವು ಕಡೆ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಿದೆ ಎಂದು ಅವರು ವಿವರಿಸಿದರು. ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಂದ ಬೇಸತ್ತಿರುವ ಜನ ಈ ಬಾರಿ ಅಭಿವೃದ್ಧಿಗಾಗಿ ಎಸ್‌ಡಿಪಿಐ ಪಕ್ಷದ ಕಡೆ ಒಲವು ತೋರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಸದೃಢ, ಸಮೃದ್ಧ, ಸೌಹಾರ್ದಯುತ ಕರ್ನಾಟಕಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಮತದಾರರು ಎಸ್ಡಿಪಿಐ ಯನ್ನು ಬೆಂಬಲಿಸಬೇಕೆಂದು ಕರೆ ನೀಡಿದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ