ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ನಂಜುಡಪ್ಪ ವರದಿಯ ಅನುಷ್ಠಾನ ವಿಚಾರದಲ್ಲಿ ಈವರೆಗಿನ ಯಾವ ಸರ್ಕಾರವೂ ಬದ್ಧತೆಯಿಂದ ಕಾರ್ಯನಿರ್ವಹಿಸಿಲ್ಲ: ಅಫರ್ ಕೊಡ್ಲಿಪೇಟೆ ಆರೋಪ
ಇಲ್ಲಿಯವರೆಗೆ ಅಡಳಿತ ನಡೆಸಿದ ಯಾವುದೇ ಪಕ್ಷದ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಯಾವುದೇ ರೀತಿಯಾದ ಪ್ರಾಧಾನ್ಯತೆ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ ಜಾರಿಗೆ ಬಂದ 371ಜೆ ಕಲಂನಡಿ ಈ ವರೆಗೆ ಶೈಕ್ಷಣಿಕವಾಗಿ ಉತ್ತಮ ಅವಕಾಶ ದೊರೆತಿದ್ದರೂ ಉದ್ಯೋಗ ಅವಕಾಶ, ಮುಂಬಡ್ತಿ ವಿಷಯದಲ್ಲಿ ಅನ್ಯಾಯವಾಗುತ್ತಿದ್ದು ಸರಕಾರ ಸಮರ್ಪಕವಾಗಿ ಕಲಂ ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು. ನಂಜುಡಪ್ಪ ವರದಿಯ ಅನುಷ್ಠಾನ ವಿಚಾರದಲ್ಲಿ ಈವರೆಗಿನ ಯಾವುದೇ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸಿಲ್ಲ. ಹೀಗಾಗಿ, ರಾಜ್ಯದಲ್ಲಿ 39ರಷ್ಟಿದ್ದ ಅತ್ಯಂತ ಹಿಂದುಳಿದ ತಾಲೂಕುಗಳ ಸಂಖ್ಯೆ ಈಗ 40ಕ್ಕೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21 ರಷ್ಟಿದ್ದ ಅತ್ಯಂತ ಹಿಂದುಳಿದ ತಾಲೂಕುಗಳ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಎಂದು ಸಿಎಂಡಿಆರ್ ಸಂಸ್ಥೆ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಅಪ್ಪ ಕೊಡ್ಲಿಪೇಟೆ ಹೇಳಿದರು. ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಂದ ಬೇಸತ್ತಿರುವ ಜನ ಈ ಬಾರಿ ಅಭಿವೃದ್ಧಿಗಾಗಿ ಎಸ್‌ಡಿಪಿಐ ಪಕ್ಷದ ಕಡೆ ಒಲವು ತೋರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಸದೃಢ, ಸಮೃದ್ಧ, ಸೌಹಾರ್ದಯುತ ಕರ್ನಾಟಕಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಮತದಾರರು ಎಸ್ಟಿಪಿಐ ಯನ್ನು ಬೆಂಬಲಿಸಬೇಕೆಂದು ಕರೆ ನೀಡಿದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ