ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪಕ್ಷದ ಬಾಗಲಕೋಟೆ ಜಿಲ್ಲಾ ಬೂತ್ ಉಸ್ತುವಾರಿಗಳ ತರಬೇತಿ ಸಭೆಯನ್ನು ದಿನಾಂಕ 9.02.2023 ರಂದು ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಭೆಯಲ್ಲಿ ಬಾಗಲಕೋಟೆ ಜಿಲ್ಲಾಧ್ಯಕ್ಷ ಸಲೀಂ ಅವಟಿ, ಜಿಲ್ಲಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಉಮ್ಮರ್ ಫಾರೂಕ್, ಮತ್ತು ತೇರದಾಳ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಉಸ್ತುವಾರಿಗಳು ಭಾಗವಹಿಸಿದ್ದರು.