ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂದು ಬಹಿರಂಗವಾಗಿ ಕೊಲೆಗೆ ಪ್ರಚೋದನೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಬಂಧಿಸಬೇಕು:
ಬಿ. ಆರ್. ಭಾಸ್ಕರ್ ಪ್ರಸಾದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ
ಬೆಂಗಳೂರು, 16 ಫೆಬ್ರವರಿ 2023: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂದು ಬಹಿರಂಗವಾಗಿ ಕೊಲೆಗೆ ಪ್ರಚೋದನೆ ನೀಡಿರುವ ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ರವರ ಕೊಲೆಗಡುಕತನದ ಹೇಳಿಕೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷ ಬಲವಾಗಿ ಖಂಡಿಸುತ್ತದೆ ಮತ್ತು ಕೂಡಲೇ ಅಶ್ವತ್ಥನಾರಾಯಣ ಅವರನ್ನು ಬಂಧಿಸಲು ಆಗ್ರಹಿಸುತ್ತದೆ ಎಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಒತ್ತಾಯಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರು ಮಂಡ್ಯದಲ್ಲಿ ನಡೆದ ಬಿಜೆಪಿ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಮಾತನಾಡುತ್ತಾ, ನಂಜೇಗೌಡ ಮತ್ತು ಉರಿಗೌಡರು ಅಪ್ಪ ಸುಲ್ತಾನರನ್ನು ಹೊಡೆದು ಹಾಕಿದಂತೆ! ಮೇಲಕ್ಕೆ ಕಳಿಸಿದಂತೆ! ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು, ಮೇಲಕ್ಕೆ ಕಳಿಸಬೇಕು ಎಂದು ಮಾತನಾಡಿದ್ದಾರೆ. ಆ ಮೂಲಕ ಕೊಲೆಗೆ ಪ್ರಚೋದಸುವ ಅಪರಾಧವನ್ನು ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಡೆದು ಹಾಕಬೇಕು ಎಂದು ಬಹಿರಂಗವಾಗಿ ಹೇಳಿಕೆ ನೀಡಿ ಅವರ ಕೋಲೆಗೆ ಬಹಿರಂಗವಾಗಿ ಪ್ರಚೋದನೆ ನೀಡಿರುವುದು ಕಾನೂನು ಪ್ರಕಾರ ಅಪರಾಧವಾಗಿರುತ್ತದೆ. ಸಚಿವರ ಅಪರಾಧೀಯ ಮತ್ತು ಕೊಲೆಗಡುಕತನದ ಹೇಳಿಕೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಖಂಡಿಸುತ್ತದೆ ಮತ್ತು ಅವರ ಮೇಲೆ ಕೂಡಲೇ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಪೋಲಿಸ್ ಇಲಾಖೆಯನ್ನು ಕೋರುತ್ತದೆ ಎಂದು ಭಾಸ್ಕರ್ ಅವರು ತಮ್ಮ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಬಿ.ಆರ್ ಭಾಸ್ಕರ್,
ಪ್ರಸಾದ್ ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ
ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ
1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…
1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ…