13
Apr

ಮೈಸೂರು: ನರಸಿಂಹರಾಜ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಇಂದು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರಾಜೀವ್ ನಗರದ ಅಲ್ ಬದರ್ ಸರ್ಕಲ್ ನಿಂದ ಪಕ್ಷದ ಸಾವಿರಾರು ಕಾರ್ಯಕರ್ತರು ಉದಯಗಿರಿ ಪಕ್ಷದ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದು ನಂತರ ಅಲ್ಲಿಂದ ಪಕ್ಷದ ಕೆಲ ಹಿರಿಯ ನಾಯಕರ ಜೊತೆಗೂಡಿ ಚಾಮುಂಡಿವಿಹಾರ ಕ್ರೀಡಾಂಗಣಕ್ಕೆ ತೆರಳಿ ಅಬ್ದುಲ್ ಮಜೀದ್ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಬಿಎಸ್‌ ಪಿ ರಾಜ್ಯ ಕಾರ್ಯದರ್ಶಿ ಶಂಕರ್, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಫತ್‌ ಖಾನ್ ಉಪಸ್ಥಿತರಿದ್ದರು

Leave A Comment