ರಾಯಚೂರು. (ಮೇ-18): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಯಚೂರು ವಿಧಾನಸಭಾ ಕ್ಷೇತ್ರ ಚುನಾವಣಾ ಉಸ್ತುವಾರಿ ಸಮಿತಿಯ ವಿಧಾನಸಭಾ ಚುನಾವಣೆ ಅವಲೋಕನ ಸಭೆ ಪಕ್ಷದ ಕಚೇರಿಯಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷರಾದ ತೌಸೀಫ್ ಅಹಮದ್ ಮತ್ತು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ, ರಾಜ್ಯ ಸಮಿತಿ ಸದಸ್ಯರಾದ ರಹೀಮ್ ಪಟೇಲ್ ರವರ ಉಪಸ್ಥಿತಿಯಲ್ಲಿ ನಡೆಯಿತು. ಅವಲೋಕನ ಸಭೆಯಲ್ಲಿ ಈ ಬಾರಿಯ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಲು ಇಡೀ ರಾಜ್ಯದ ಜನರು ಮಾನಸಿಕವಾಗಿ ತಯಾರಾಗಿದ್ದ ಪ್ರತಿಕೂಲ ಪರಿಸ್ಥಿತಿಯಲ್ಲಿ ಆಮಿಷ ಗಳ ಅಲೆಯ ನಡುವೆ, ಅಗತ್ಯ ಸಂಪನ್ಮೂಲಗಳ ಕೊರತೆಯ ನಡುವೆಯೂ ನಮ್ಮ ನಿರೀಕ್ಷೆ ಮಟ್ಟದ ಗುರಿ ತಲುಪಲು ನಾವು ಎಡವಿದ್ದು ಎಲ್ಲಿ? ಮತ್ತು ನಮ್ಮ ಗುರಿಯತ್ತ ಸಾಗಲು ಅಡೆತಡೆಯಾದ ಬಾಹ್ಯ ಅಂಶಗಳು ಯಾವುವು? ಅದನ್ನು ಮುಂದಿನ ಚುನಾವಣೆಗಳಲ್ಲಿ ನಾವು ಹೇಗೆ ಅತಿಜಯಿಸಬೇಕು? ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಮತ್ತು ಆಗಿರುವ ಕೊರತೆಗಳನ್ನು ನೀಗಿಸಿಕೊಂಡು ಮುಂಬರಲಿರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಹೇಗೆ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು? ಬೂತ್ ಸಮಿತಿಗಳ ಬಲವರ್ದನೆಯ ಕಾರ್ಯತಂತ್ರಗಳ ಕುರಿತು ಸಮಾಲೋಚನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೀಲಾನ್, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ಚುನಾವಣಾ ಉಸ್ತುವಾರಿಗಳು, ಪಕ್ಷದ ಹಿರಿಯರು ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ