17
Jun

ಮೈಸೂರಿನ ಕೆ.ಆರ್. ಪೇಟೆಯಲ್ಲಿರುವ ಅಲ್ಪಸಂಖ್ಯಾತ ಮಾದರಿ ವಸತಿ ಶಾಲೆಯಲ್ಲಿ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ಝೈಬುನ್ನಿಸಾ ಹಾಸ್ಟೆಲ್ ನಲ್ಲಿ ಅನುಮಾನಾಸ್ಪದವಾಗಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ದೈಹಿಕ ಶಿಕ್ಷಕ ರವಿ ಆಕೆಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪಗಳು ಕೇಳಿ ಬಂದಿದ್ದವು. ಈ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನಗಳು ಅಂದು ದೊಡ್ಡಮಟ್ಟದಲ್ಲಿ ನಡೆದಿದ್ದವು. ಎಸ್.ಡಿ.ಪಿ.ಐ ಪಕ್ಷ ಇದರ ವಿರುದ್ಧ ದೊಡ್ಡ ಹೋರಾಟ ಮಾಡುವ ಮೂಲಕ ರಾಜ್ಯದೆಲ್ಲೆಡೆ ಚರ್ಚೆಗೆ ತಂದಿತ್ತು. ಎಸ್.ಡಿ.ಪಿ.ಐ ಪಕ್ಷದ ಅಬ್ದುಲ್ ಮಜೀದ್ ಅವರು ಅಂದಿನ ಹೋರಾಟದ ನೇತೃತ್ವ ವಹಿಸಿ ಪ್ರಕರಣ ದಾಖಲಾಗುವಂತೆ ನೋಡಿಕೊಂಡಿದ್ದರು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 5 ಲಕ್ಷ ರುಪಾಯಿಗಳ ಪರಿಹಾರ ಕೊಡಿಸುವಲ್ಲಿ ಯಶಸ್ವಿಯಾಗಿದ್ದರು. ಈಗ ನ್ಯಾಯಾಲಯವು ಆರೋಪಿ ರವಿಗೆ 2 ವರ್ಷ ಕಠಿಣ ಸಜೆ ಮತ್ತು 50 ಸಾವಿರ ದಂಡದ ಜೊತೆಗೆ ಸಂತ್ರಸ್ತೆಯ ಕುಟುಂಬಕ್ಕೆ 2 ಲಕ್ಷ ಪರಿಹಾರವನ್ನೂ ನೀಡಬೇಕೆಂದು ಆದೇಶಿಸಿದೆ. ಇದು ಎಸ್.ಡಿ.ಪಿ.ಐ ಪಕ್ಷದ ಹೋರಾಟಕ್ಕೆ ಸಂದ ಜಯವಾಗಿದೆ.

Previous Post

Leave A Comment