19
Jun

ಹಾಸನ, ಜುಲೈ 18 : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಾಸನದ ಜಿಲ್ಲಾ ಕಛೇರಿ ಉದ್ಘಾಟನೆ, ಹಾಗೂ ನಾಯಕರ ಶೃಂಗ ಸಭೆ ಮತ್ತು ಕಾರ್ಯಕರ್ತರ ಸಮಾವೇಶ ಹಾಸನದ ಜಿಲ್ಲಾ ಕಚೇರಿಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಮತ್ತು ಜಿಲ್ಲಾಧ್ಯಕ್ಷರಾದ ಸಿದ್ದಿಕ್ ಆನೆಮಹಲ್, ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.

ಕಾರ್ಯಕರ್ತರನ್ನು ಉದ್ದೇಶಿಸಿ ಎಸ್‌ಡಿಪಿಐ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ರಾಜಕೀಯ ಯಶಸ್ಸು ಖಚಿತವಾಗಿದೆ ಎಂದು ತಿಳಿಸಿದರು. ಇದಕ್ಕಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಕ್ಷದ ಸಿದ್ಧಾಂತವನ್ನು ಜಾತಿ,ಮತ, ವರ್ಣ ಮತ್ತು ಸ್ಥಳಗಳ ಭೇದ-ಭಾವಗಳಿಲ್ಲದೆ ಎಲ್ಲರಿಗೂ ತಲುಪಿಸುವ ಮೂಲಕ ಒಂದು ನೈಜ ಪರ್ಯಾಯ ರಾಜಕೀಯಕ್ಕೆ ಶ್ರಮ ವಹಿಸಬೇಕಾಗಿದೆ ಎಂದು ಕರೆ ನೀಡಿದರು.

Next Post

Leave A Comment