25
Jul

ಚಿಕ್ಕಬಳ್ಳಾಪುರ : ಜುಲೈ 24 : ಸೋಶಿಯಲ್ ಡಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಬಳ್ಳಾಪುರ ಜಿಲ್ಲಾ ಪ್ರತಿನಿಧಿ ಸಭೆಯು ಜುಲೈ 23 ರಂದು ನಡೆಯಿತು. ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಯವರ ಸಮ್ಮುಖದಲ್ಲಿ ನಡೆದ ಪಕ್ಷದ ಆಂತರಿಕ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಶಂಶುದ್ದೀನ್, ಪ್ರಧಾನ ಕಾರ್ಯದರ್ಶಿಯಾಗಿ ಮಹಮ್ಮದ್ ಫರೀದುದ್ದೀನ್, ಕಾರ್ಯದರ್ಶಿಯಾಗಿ ಸಿದ್ದೀಕ್ ಪಾಷ, ಕೋಶಾಧಿಕಾರಿಯಾಗಿ ಸಯ್ಯದ್ ಯೂನುಸ್ ಸಮಿತಿ ಸದಸ್ಯರಾಗಿ ಖಲೀಲ್ ಉಲ್ಲಾ ಶರೀಷ್, ಅಜ್ಗರ್ ಖಾನ್ ಖಾಜಾ ಶರೀಷ್ ರವರು ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಸಹಾಯಕ ಚುನಾವಣಾಧಿಕಾರಿಯಾಗಿ ರಾಜ್ಯ ಸಮಿತಿ ಸದಸ್ಯ ಹಾಗೂ ಬೆಂಗಳೂರು ಜಿಲ್ಲಾಧ್ಯಕ್ಷ ಮುಜಾಹಿದ್ ಪಾಷಾ ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಚಿಕ್ಕಬಳ್ಳಾಪುರ

Previous Post

Leave A Comment