06
Aug

ಹಾಸನ 04 ಆಗಸ್ಟ್ 2023: ಸಂಘಪರಿವಾರ ಹಬ್ಬಿದ ದ್ವೇಷದ ನಂಜಿನ ಪರಿಣಾಮ ಇಡೀ ದೇಶವೇ ಹೊತ್ತಿ ಉರಿಯುತ್ತಿದೆ. ಮಣಿಪುರದಲ್ಲಿ ಜಾನಾಂಗೀಯ ಕಲಹ, ಹರಿಯಾಣದಲ್ಲಿ ಕೋಮು ಗಲಭೆ, ಮಹಾರಾಷ್ಟ್ರದಲ್ಲಿ RPF ಯೋಧನ ಕೋಮು ದ್ವೇಷಕ್ಕೆ ರೈಲಿನಲ್ಲಿ ಅಮಾಯಕರ ಬಲಿ ಸೇರಿದಂತೆ ದೇಶದ ನಾನಾ ಭಾಗಗಳಲ್ಲಿ ಹಿಂಸಾಚಾರ ಹಬ್ಬಿಕೊಂಡಿದೆ. ಇಂತಹ ಸನ್ನಿವೇಶಕ್ಕೆ ಕಾರಣವಾದ ಬಿಜೆಪಿ ಮತ್ತು ಸಂಘಪರಿವಾರದ ದ್ವೇಷದ ರಾಜಕಾರಣವನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾದ್ಯಂತ ಪ್ರತಿಭಟನೆ ಮಾಡುವ ಮೂಲಕ ತೀವ್ರವಾಗಿ ಖಂಡಿಸುತ್ತದೆ ಎಂದು ಹಾಸನದಲ್ಲಿ ಇಂದು ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಅಪ್ಸರ್ ಕೊಡ್ಲಿಪೇಟೆ ಆಕ್ರೋಶ ವ್ಯಕ್ತಪಡಿಸಿದರು .

ಬಿಜೆಪಿ ಪಕ್ಷಕ್ಕೆ ಹಿಂಸಾಚಾರ, ಕೋಮು ದ್ವೇಷ ರಾಜಕೀಯ ಅಸ್ತ್ರ ಆ ಕಾರಣಕ್ಕಾಗಿಯೇ ಮೂರು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಅಲ್ಲಿ ಶಾಂತಿ ಮರಳುವಂತೆ ಮಾಡುವ ನಿಟ್ಟಿನಲ್ಲಿ ಒಂದೇ ಒಂದು ಪ್ರಯತ್ನವನ್ನೂ ಮೋದಿ ನೇತೃತ್ವದ ಸರ್ಕಾರ ಮಾಡಲಿಲ್ಲ. ಪ್ರಧಾನಿ ಮೋದಿ ಅಲ್ಲಿನ ಜನರಿಗೆ ಶಾಂತಿ ಕಾಪಾಡಿ ಎಂದು ಹೇಳುವ ತಮ್ಮ ಕನಿಷ್ಠ ಕರ್ತವ್ಯವನ್ನೂ ಪಾಲಿಸಲಿಲ್ಲ. ಮಣಿಪುರ ಎಂಬ ಪದ ಬಳಸಲೂ ಹಿಂಜರಿದರು. ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರ ಪ್ರಕರಣ ಹೊರ ಬಂದಾಗ ವಿಧಿ ಇಲ್ಲದೆ ಮಣಿಪುರದ ಬಗ್ಗೆ ಮೋದಿ ಮಾತನಾಡಿದರಾದರೂ ಅವರ ಮಾತಿನಲ್ಲಿ ಘಟನೆಯ ಕುರಿತು ವಿಷಾದ ಅಥವಾ ನೋವಿಗಿಂತ ಹೆಚ್ಚಾಗಿ, ಈ ಘಟನೆಯಿಂದ ತಮ್ಮ ಇಮೇಜಿಗೆ ಧಕ್ಕೆಯಾಗಿದೆ ಅನ್ನುವ ಸಿಟ್ಟು ಎದ್ದು ಕಾಣುತ್ತಿತ್ತು ಎಂದು ಜಿಲ್ಲಾಧ್ಯಕ್ಷರಾದ ಸಿದ್ದಿಕ್ ಆನೆಮಹಲ್ ಆರೋಪಿಸಿದರು.

ದೇಶದ ಎಲ್ಲೆಡೆ ಹಬ್ಬಿದ ದ್ವೇಷದ ವಿಷ ರೈಲ್ವೆ ಭದ್ರತಾ ಸಿಬ್ಬಂದಿಯ ತಲೆಗೂ ಹೊಕ್ಕಿದ್ದು ದುರಂತ. ಮಹಾರಾಷ್ಟ್ರದಲ್ಲಿ RPF ಯೋಧ ಚೇತನ್ ಸಿಂಗ್ ರೈಲಿನಲ್ಲಿ ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತನ್ನ ಉನ್ನತ ಅಧಿಕಾರಿಯನ್ನು ಗುಂಡಿಕ್ಕಿ ಕೊಂದು ನಂತರ, ಭೋಗಿಯಿಂದ ಭೋಗಿಗೆ ಹೋಗಿ ಮುಸ್ಲಿಂ ಪ್ರಯಾಣಿಕರನ್ನು ಹುಡುಕಿ 3 ಜನ ಅಮಾಯಕ ಮುಸ್ಲಿಂ ಪ್ರಯಾಣಿಕರನ್ನು ಕೊಂದಿದ್ದಾನೆ. ಇದು ದೇಶದಲ್ಲಿ ಸಂಘಪರಿವಾರಾದ ಜೊತೆ ಸೇರಿಕೊಂಡು ಗೋದಿ ಮಾಧ್ಯಮ ಹಬ್ಬಿರುವ ದ್ವೇಷದ ಪರಿಣಾಮ ಎಂಬುದು ಹತ್ಯಾಕಾಂಡದ ನಂತರ ಯೋಧ ಮಾತನಾಡಿರುವ ಮಾತುಗಳಿಂದ ಸ್ಪಷ್ಟವಾಗುತ್ತದೆ.

ಈ ಎಲ್ಲ ಘಟನೆಗಳನ್ನು ಎಸ್.ಡಿ.ಪಿ.ಐ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಮತ್ತು ಇಂತಹ ಕೃತ್ಯಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರತಿಭಟಣಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷರಾದ ಸಿದ್ದಿಕ್ ಆನೆಮಹಲ್,ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಪ್ರಧಾನ ಕಾರ್ಯದರ್ಶಿ ಸೈಯದ್ ಫರೀದ್,ಉಪಾಧ್ಯಕ್ಷರಾದ ಸೈಯದ್ ಇರ್ಫಾನ್,ಜಿಲ್ಲಾ ಸಮಿತಿ ಸದಸ್ಯರಾದ ಫೈರೋಜ್ ಪಾಶ,ಅಮೀರ್ ಜಾನ್,ಹಾಸನ ಆಸೆಂಬ್ಲಿ ಅಧ್ಯಕ್ಷರಾದ ಶಜೀಲ್,ಸೈಯದ್ ಸಫೀರ್‌,ಮಿಲಾದ್‌ ಕಮಿಟಿ ಅಧ್ಯಕ್ಷರಾದ ಅಕ್ರಮ್ ಪಾಶ,ಬಿಮ್ ಆರ್ಮಿ ಜಿಲ್ಲಾಧ್ಯಕ್ಷರಾದ ಪ್ರದೀಪ್‌, ನವೀನ್, ಅರಕಲಗೂಡು ಅಕ್ರಮ್ ಈತರರು ಉಪಸ್ಥಿತರಿದ್ದರು

Leave A Comment