Categories: featureNewsPolitics

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ನಾಯಕರ ಶೃಂಗ ಸಭೆಯು ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಜಬೀಉಲ್ಲಾ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಭೆಗೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ಡಿಪಿಐ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಲ್ಫೋನ್ಸ್ ಫ್ರಾಂಕೊ ರವರು ಮಾತನಾಡಿ ಎಸ್ಡಿಪಿಐ ಪಕ್ಷದ 14 ವರ್ಷದ ರಾಜಕೀಯದಲ್ಲಿ ವಿಧಾನ ಸಭೆಗೆ ಪ್ರವೇಶಿಸಲು ಅಸಾಧ್ಯವಾಗಿದ್ದರೂ ಕೂಡ ವಿಧಾನ ಸಭೆ ಪ್ರವೇಶಿಸುವ ಜನಪ್ರತಿನಿಧಿಗಳಿಗೆ ಎಚ್ಚರಿಕೆಯ ಕರೆಗಂಟೆ ನೀಡಲು ಸಾಧ್ಯವಾಗಿದೆ. ಮಾತ್ರವಲ್ಲದೆ ಜನ ಸಾಮಾನ್ಯರಲ್ಲಿ ರಾಜಕೀಯ ಪ್ರಜ್ಞೆ ಹಾಗೂ ಜಾಗೃತಿಯನ್ನು ಮೂಡಿಸುವುದರಲ್ಲಿ ಯಶಸ್ವಿಯಾಗಿದೆ. ಆದ್ದರಿಂದ ಎಸ್ಡಿಪಿಐ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ರಾಜಕೀಯ ಯಶಸ್ಸು ಖಚಿತವಾಗಿದೆ ಎಂದು ತಿಳಿಸಿದರು. ಇದಕ್ಕಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಪಕ್ಷದ ಸಿದ್ಧಾಂತವನ್ನು ಜಾತಿ,ಮತ, ವರ್ಣ, ಮತ್ತು ಸ್ಥಳಗಳ ಬೇದ ಭಾವಗಳಿಲ್ಲದೆ ಎಲ್ಲರಿಗೂ ತಲುಪಿಸುವ ಮೂಲಕ ಒಂದು ನೈಜ ಪರ್ಯಾಯ ರಾಜಕೀಯಕ್ಕೆ ಶ್ರಮ ವಹಿಸಬೇಕಾಗಿದೆ ಎಂದು ಅವರು ಕರೆ ನೀಡಿದರು. ಬಿಜೆಪಿ ಪಕ್ಷಕ್ಕೆ ಹಿಂಸಾಚಾರ, ಕೋಮು ದ್ವೇಷ ರಾಜಕೀಯ ಅಸ್ತ್ರ ಆ ಕಾರಣಕ್ಕಾಗಿಯೇ ಮೂರು ತಿಂಗಳಿಂದ ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಅಲ್ಲಿ ಶಾಂತಿ ಮರಳುವಂತೆ ಮಾಡುವ ನಿಟ್ಟಿನಲ್ಲಿ ಒಂದೇ ಒಂದು ಪ್ರಯತ್ನವನ್ನೂ ಮೋದಿ ನೇತೃತ್ವದ ಸರ್ಕಾರ ಮಾಡಲಿಲ್ಲ. ಪ್ರಧಾನಿಯಾಗಿ ಮೋದಿ ಅಲ್ಲಿನ ಜನರಿಗೆ ಶಾಂತಿ ಕಾಪಾಡಿ ಎಂದು ಹೇಳುವ ತಮ್ಮ ಕನಿಷ್ಠ ಕರ್ತವ್ಯವನ್ನೂ ಪಾಲಿಸಲಿಲ್ಲ ಎಂದು ಆರೋಪಿಸಿದರು.

ನಂತರ ಜಿಲ್ಲಾ ನಾಯಕರೊಂದಿಗೆ ರಾಜಕೀಯ ಸಂವಾದ ನಡೆಸಿ ಜಿಲ್ಲೆಯಲ್ಲಿ ಮುಂದೆ ನಡೆಸಬಹುದಾದ ರಾಜಕೀಯ ನಡೆಯ ಬಗ್ಗೆ ಚರ್ಚೆ ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಶ್ಫಾಕ್, ಜಿಲ್ಲಾ ಕೋಶಾಧಿಕಾರಿ ತಾಹಿರ್, ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರುಗಳು ಉಪಸ್ಥಿತರಿದ್ದರು.

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

5 days ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

5 days ago