ಬೆಂಗಳೂರು: ಸಪ್ಟೆಂಬರ್ 22, ಕಾವೇರಿ ನದಿ ನೀರು ಹಂಚಿಕೆಯಲ್ಲಿ ಸುಪ್ರಿಂ ಕೋರ್ಟಿನಲ್ಲೂ ರಾಜ್ಯಕ್ಕೆ ಹಿನ್ನೆಡೆಯಾಗಿರುವ ಹಿನ್ನೆಲೆಯಲ್ಲಿ ಹೋರಾಟ ತೀವ್ರಗೊಳಿಸಲು ವಿವಿಧ ಸಂಘಟನೆಗಳು ನೀಡಿದ ಬಂದ್ ಕರೆಗೆ ಎಸ್‌ಡಿಪಿಐ ಪಕ್ಷ ಬೆಂಬಲ ಸೂಚಿಸಿದೆ. ಕಾವೇರಿ ನದಿ ನೀರು ಹಂಚಿಕೆ ಸಂಬಂಧದ ವಿಚಾರಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಎಂದು ತೀರ್ಪಿನ ವಿರುದ್ಧ ರೈತರು, ಸಾರ್ವಜನಿಕರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದು,
ಎಲ್ಲಾ ಸಂಘಟನೆಗಳು ಹಮ್ಮಿಕೊಳ್ಳುವ ಶಾಂತಿಯುತ ಪ್ರತಿಭಟನೆಗೆ ಎಸ್‌ಡಿಪಿಐ ಪಕ್ಷ ನೈತಿಕ ಬೆಂಬಲ ನೀಡಲಿದೆ ಮತ್ತು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯಲ್ಲಿ ಕಾವೇರಿ ವಿವಾದದ ಬಗ್ಗೆ ವಿಸೃತವಾಗಿ ಚರ್ಚಿಸಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ –
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ