ಎಸ್‌ಡಿಪಿಐ ರಾಜ್ಯ ಕಾರ್ಯದರ್ಶಿ ಮಂಡಳಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರ ಅಧ್ಯಕ್ಷತೆಯಲ್ಲಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ಉಸ್ತುವಾರಿ ಮಜೀದ್ ಫೈಝಿ ಅವರ ಉಪಸ್ಥಿತಿಯಲ್ಲಿ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮುಂದಿನ ಲೋಕಸಭಾ ಚುನಾವಣೆ ಮತ್ತು ಮೈಸೂರು ನಗರ ಪಾಲಿಕೆ ಚುನಾವಣೆ ಮತ್ತು ಜಿ.ಪಂ ಮತ್ತು ತಾ.ಪಂ ಚುನಾವಣೆಯ ಪೂರ್ವ ತಯಾರಿಯ ಕುರಿತು ಚರ್ಚೆ ನಡೆಸಲಾಯಿತು. ಪ್ಯಾಲೆಸ್ತೀನ್ ಜನತೆಯ ಹೋರಾಟಕ್ಕೆ ಸಾಲಿಡಾರಿಟಿ ಘೋಷಿಸಿಕೊಂಡು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಿ.ಆರ್ ಭಾಸ್ಕರ್ ಪ್ರಸಾದ್, ಅಪ್ಸರ್ ಕೊಡ್ಲಿಪೇಟೆ, ರಾಷ್ಟ್ರೀಯ ಸಮಿತಿ ಸದಸ್ಯರಾದ ಅಬ್ದುಲ್ ಹನ್ನಾನ್ ಮತ್ತು ಕಾರ್ಯದರ್ಶಿ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ