ಬೆಂಗಳೂರು, 09 ಅಕ್ಟೋಬರ್ 2023: ಗ್ರೂಪ್ ಸಿ ಹುದ್ದೆಗಳ ಪರೀಕ್ಷೆಯ ವೇಳೆ ಮಹಿಳೆಯರ ಮಂಗಳಸೂತ್ರ, ಕಾಲುಂಗುರ ತೆಗೆಸಿರುವ ಘಟನೆ ಅಕ್ಷಮ್ಯ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕೂಡಲೇ ನೊಂದ ಮಹಿಳೆಯರ ಕ್ಷಮೆ ಯಾಚಿಸಿ ಇಂತಹ ಆಘಾತಕಾರಿ ಘಟನೆಗೆ ಕಾರಣರಾದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಒತ್ತಾಯಿಸದ ಅವರು ಮತ್ತೆಂದೂ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲು ತಡೆಯುವ ನೆಪದಲ್ಲಿ ಈ ಹಿಂದೆಯೂ ಮಹಿಳಾ ಪರೀಕ್ಷಾ ಅಭ್ಯರ್ಥಿಗಳ ಮೇಲೆ ಈ ರೀತಯ ಶೋಷಣೆ ನಡೆದಿದೆ. ಅವರ ಮೇಲೆ ದಬ್ಬಾಳಿಕೆ ನಡೆಸುವ ಉದ್ದೇಶವಲ್ಲದೆ ಬೇರೆ ಯಾವ ಕಾರಣವೂ ಇಂತಹ ಪ್ರಕರಣಗಳಲ್ಲಿ ಕಾಣಲು ಸಾಧ್ಯವಿಲ್ಲ. ಮಂಗಳಸೂತ್ರ, ಕಾಲುಂಗರಗಳ ಮೂಲಕ ಯಾವ ರೀತಿ ನಕಲು ಮಾಡಲು ಸಾಧ್ಯ? ಸಾಮಾನ್ಯ ಜ್ಞಾನ ಇಲ್ಲದ ಕೆಲವು ಅಧಿಕಾರಿಗಳ ಈ ದುಂಡಾ ವರ್ತನೆಗೆ ಸರ್ಕಾರ ತಕ್ಷಣ ಕಡಿವಾಣ ಹಾಕಬೇಕು ಎಂದು ಅಫ್ಸರ್ ಅವರು ತಮ್ಮ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಈ ಕೇಸನ್ನು…
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…