Categories: featureNewsPolitics

ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಅವರನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್‌ ಇಂಡಿಯಾ, ಪುತ್ತೂರು ವಿಧಾನ ಸಭಾ ಕ್ಷೇತ್ರದ ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು, ಪುತ್ತೂರು ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸಾಗರ್,ಜಿಲ್ಲಾ ಸಮಿತಿ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಕ್ಷೇತ್ರ ಸಮಿತಿಯ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಸಮಿತಿ ಸದಸ್ಯರಾದ ಅಬ್ದುಲ್ ರೆಹಮಾನ್‌ (ರಹೀಂ) ಮತ್ತು ಪುತ್ತೂರು ನಗರಾಧ್ಯಕ್ಷರಾದ ಸಿರಾಜ್ ಕೂರ್ನಡ್ಕ ಮತ್ತು ಇತರರು ಉಪಸ್ಥಿತರಿದ್ದರು.

admin

Recent Posts

ಬೆಂಗಳೂರು ವಿಭಾಗೀಯ ಮಟ್ಟದ Political affairs ಸಭೆ

ದಿನಾಂಕ 14/11/2026ರಂದು ಬೆಂಗಳೂರು ಪ್ರಧಾನ ಕಚೇರಿ ಯಲ್ಲಿ SDPI ಪಕ್ಷದ Political Affairs ಬೆಂಗಳೂರು ವಿಭಾಗೀಯ ಮಟ್ಟದ ಜಿಲ್ಲೆಗಳ ಸಭೆಯು…

3 days ago

ಪಂಚಾಯತ್ ಚುನಾವಣೆಗೆ ಸಿದ್ಧರಾಗಿ -ಅಬ್ದುಲ್ ಮಜೀದ್‌

ಇಂದು ನಡೆದ ಕೊಪ್ಪಳ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧರಾಗುವಂತೆ SDPI…

4 days ago