ಜಾಮರಾಜನಗರ, ಡಿ 4, 2023: ಜಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಂದರ್ಭದಲ್ಲಿ ಸಂಭವಿಸಿದ ಅಕ್ಸಿಜನ್ ದುರಂತದಲ್ಲಿ ಮಡಿದ ಸಂತ್ರಸ್ತರ ಕುಟುಂಬ ಸದಸ್ಯರೊಬ್ಬರಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಇಂದಿಗೂ ಈಡೇರಿಲ್ಲ.ಸುಮಾರು 32 ಜನರ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಿರುವುದಾಗಿ ಜಿಲ್ಲಾಧಿಕಾರಿ ಸಿ ಟಿ ಶಿಲ್ಪಾನಾಗ್ ಮಾಹಿತಿ ನೀಡಿದರು. ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಕ್ಸಿಜನ್ ಸಂತ್ರಸ್ತ ಕುಟುಂಬಸ್ಥರು ಮನವಿ ಸಲ್ಲಿಸಿದ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಕ್ಸಿಜನ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಸುಮಾರು 32 ಜನರ ಹೆಸರನ್ನು ಸರ್ಕಾರಕ್ಕೆ ಕಳುಹಿಸಿಕೊಡಲಾಗಿದೆ.
ಈ ಮೊದಲು 24 ಜನರನ್ನು ಪಟ್ಟಿ ಮಾಡಲಾಗಿತ್ತು. ಈಗ ಒಟ್ಟು 32 ಮಂದಿಯ ಹೆಸರನ್ನು ಕಳುಹಿಸಿಕೊಡಲಾಗಿದೆ. ಚಾಮರಾಜನಗರ ವೈದ್ಯಕೀಯ ಕಾಲೇಜು, ಅರೋಗ್ಯ ಇಲಾಖೆ ಅಥವಾ ಇನ್ನಿತರ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಉದ್ಯೋಗ ಕಲ್ಪಿಸಿ ಕೊಡುವಂತೆ ಕ್ರಮ ವಹಿಸಲಾಗಿದೆ’ ಎಂದು ಸಂತ್ರಸ್ತ ಕುಟುಂಬಗಳಿಗೆ ಭರವಸೆ ನೀಡಿದರು. ಅದಷ್ಟು ಬೇಗ ಸಂತ್ರಸ್ತ ಕುಟುಂಬಸ್ಥರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುವುದು’ ಎಂದರು.
ಇದೇ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್ ಅಹಮ್ಮದ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡಿದ್ದ ಸಮಯದಲ್ಲಿ, ಆಕ್ಸಿಜನ್ ದುರಂತವನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೃತ ಕುಟುಂಬಸ್ಥರಿಗೆ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ಈ ನಿಟ್ಟಿನಲ್ಲಿ ಆಕ್ಸಿಜನ್‌ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಲ್ಲಿ ಒಬ್ಬರಿಗೆ ಆದಷ್ಟು ಬೇಗ ಸರ್ಕಾರಿ ಉದ್ಯೋಗ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರಿಗೆ ಸಂತ್ರಸ್ತ ಕುಟುಂಬಸ್ಥರು SDPI ನಾಯಕರೊಂದಿಗೆ ಮನವಿ ಸಲ್ಲಿಸಿದರು.
ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ -2 ಉಡುಪಿಯಿಂದ-ಬೆಳಗಾವಿವರೆಗೆ 2024- ಡಿಸೆಂಬರ್ 10 ರಿಂದ 16
ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ
1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…