Categories: featureNewsPolitics

ಮೈಸೂರು, 03ಡಿಸೆಂಬರ್ 2023: ಕಾಂತರಾಜ್ ವರದಿ ಅಂಗೀಕರಿಸುವಂತೆ, 2ಬಿ ಮೀಸಲಾತಿ ಪುನರ್ ಸ್ಥಾಪಿಸಿ ಅದರಡಿಯಲ್ಲಿ ಇರುವ ಮೀಸಲು ಪ್ರಮಾಣವನ್ನು ಶೇಕಡ 8% ಏರಿಸುವಂತೆ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸುವಂತೆ ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿಧಾನಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ದರ್ಶನ್ ಧ್ರುವನಾರಾಯಣ ಹಾಗೂ ಚಾಮರಾಜ ಕ್ಷೇತ್ರದ ಶಾಸಕರಾದ ಶ್ರೀ ಹರೀಶ್ ಗೌಡ ರವರುಗಳಿಗೆಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮನವಿ ಮಾಡಲಾಯಿತು.ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಸಮಿತಿ ಸದಸ್ಯರಾದ ಅಮ್ಜದ್ ಖಾನ್ , ನಗರ ಜಿಲ್ಲಾ ಸಮಿತಿಯ ಉಪಾಧ್ಯಕ್ಷರೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಆದ ಸ್ವಾಮಿ ಎಸ್ ರವರು, ಕಾರ್ಯದರ್ಶಿ ಫರ್ದೀನ್ ಅಹಮದ್ ಜಿಲ್ಲಾ ಸಮಿತಿ ಸದಸ್ಯರಾದ ಮನ್ಸೂರ್ ಖಾನ್ ಹಾಗೂ ಮನ್ಸೂರ್ ಅಹಮದ್ ಉಪಸ್ಥಿತರಿದ್ದರು.

Recent Posts

ನ್ಯಾಯವ್ಯವಸ್ಥೆಯ ಮೇಲೆ ಆಕ್ರಮಣ: ಎಸ್‌ಜಿ ತುಷಾರ್ ಮೆಹ್ತಾ ಅವರ ಹೇಳಿಕೆಗೆ ಬಿಎಂ ಕಾಂಬ್ಳೆ ಖಡಕ್ ಪ್ರತಿಕ್ರಿಯೆ

2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್‌ ಎದುರು ಕೇಂದ್ರ ಸರಕಾರದ…

4 minutes ago

ಪತ್ರಿಕಾ ವರದಿ (Newspaper Coverage):

ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…

2 days ago

ಪತ್ರಿಕಾ ಪ್ರಕಟಣೆ

ಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*

ಗಂಗಾವತಿ:ಜುಲೈ 8:
ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು.

ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು .
ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.

ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್
ಉಪಸ್ಥಿತರಿದ್ದರು.

3 days ago