ಬೆಂಗಳೂರು, 25 ಜನವರಿ 2024: ಬಾಬರಿಯನ್ನು ಕಳೆದುಕೊಂಡು ನೋವಿನಲ್ಲಿರುವ ಮುಸ್ಲಿಮ್ ಸಮುದಾಯದ ಮೇಲೆ ಅವರ ಮತಗಳನ್ನು ಪಡೆದು ಅಧಿಕಾರ ಭದ್ರ ಮಾಡಿಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಏಕಿಷ್ಟು ದ್ವೇಷ? ಸಂವಿಧಾನ ಒದಗಿಸಿಕೊಟ್ಟಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಬಳಸಿಕೊಂಡು ತಮ್ಮ ನೋವನ್ನು ಹಂಚಿಕೊಂಡರೆ ಅವರ ವಿರುದ್ಧ ಪ್ರಕರಣ ದಾಖಲಿಸಿ ಅವರನ್ನು ಜೈಲಿಗಟ್ಟುವ ಮೂಲಕ ಕಾಂಗ್ರೆಸ್ ಸರ್ಕಾರ ಯಾರನ್ನು ಮೆಚ್ಚಿಸಲು ಹವಣಿಸುತ್ತಿದೆ? ಎಂದು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಪ್ರಶ್ನಿಸಿದ್ದಾರೆ.
ಬಾಬರಿ ಮಸೀದಿ, ರಾಮ ಮಂದಿರದ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ಸಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಕಾರಣಕ್ಕೆ ಗದಗ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಪ್ರಕರಣ ದಾಖಲಿಸಲಾಗಿದೆ. ರಾಯಚೂರಿನ ಸಿಂಧನೂರಿನಲ್ಲಿ ಕೇವೆಲ ಸ್ಟೇಟಸ್ ಹಾಕಿಕೊಂಡದಕ್ಕೆ ಜಮೀರ್ ಎಂಬ ಯುವಕನನ್ನು ಬಂಧಿಸಿ ಲಿಂಗಸೂರ ಜೈಲಿನಲ್ಲಿ ಕೂಡಿಹಾಕಲಾಗಿದೆ. ಕುಷ್ಟಗಿಯಲ್ಲಿ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕಾರಣಕ್ಕೆ ಪೋಲಿಸರು ಯುವಕನ ಮನೆಗೆ ನುಗ್ಗಿ ಮೋಬೈಲ್ ಕಸಿದುಕೊಂಡು ಹೋಗಿದ್ದಾರೆ. ಕೊಪ್ಪಳದಲ್ಲಿ ಶಾರೂಖ್ ಖಾನ್ ಎಂಬು ಯುವಕನ ವಿರುದ್ಧ ಫೇಸ್ಬುಕ್ ಪೋಸ್ಟ್ ಕಾರಣಕ್ಕೆ ಜಾಮೀನು ರಹಿತ ಕೇಸು ದಾಖಲಿಸಿದ್ದಾರೆ. ಒಂದಲ್ಲ ಎರಡಲ್ಲ, ಹತ್ತಾರು ಕಡೆಗಳಲ್ಲಿ ಮುಸ್ಲಿಂ ಯುವಕರ ವಿರುದ್ಧ ಈ ರೀತಿಯ ಪ್ರಕರಣಗಳು ನಡೆಯುತ್ತಿವೆ. ಬಿಜೆಪಿ ನಿಮ್ಮನ್ನು ಮುಗಿಸಿಬಿಡುತ್ತದೆ. ನಮಗೆ ಮತ ಕೊಡಿ ನಾವು ನಿಮಗೆ ರಕ್ಷಣೆ, ನ್ಯಾಯ, ಸವಲತ್ತು ಎಲ್ಲ ಕೊಡುತ್ತೇವೆ ಎಂದು ಮುಸ್ಲಿಂ ಸಮುದಾಯವನ್ನು ನಂಬಿಸಿ ಅವರ ಶೇ. 98 ಮತಗಳನ್ನು ಪಡೆದುಕೊಂಡ ಕಾಂಗ್ರೆಸ್ ಇಂದು ಅವರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ಭಾಸ್ಕರ್ ಪ್ರಸಾದ್ ತಮ್ಮ ಪ್ರಕಟಣೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೋಮು ದ್ವೇಷ ಹರಡುವ ಸಂಘಪರಿವಾರ ಮತ್ತು ಬಿಜೆಪಿ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲ್ಲು ತಾಕತ್ತಿಲ್ಲದ ಕಾಂಗ್ರೆಸ್ ಸರ್ಕಾರ ಅಮಾಯಕರನ್ನು ಬೇಟೆಯಾಡುತ್ತಿದೆ. ಆ ಮೂಲಕ ಮುಸ್ಲಿಂ ಸಮುದಾಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುತ್ತಿದೆ. ದಲಿತ ಮತ್ತು ಮುಸ್ಲಿಂ ವಿರೋಧಿ ಕೃತ್ಯಗಳು ರಾಜ್ಯದಾದ್ಯಂತ ಮೆರೆದಾಡುತ್ತಿವೆ. ಸ್ಥಿತಿ ಹೀರುವಾಗ ಸಿದ್ದರಾಮಯ್ಯ ರಾಜ್ಯದಾದ್ಯಂತ ಸಂವಿಧಾನದ ಮೆರವಣಿಗೆಗೆ ಹೊರಟಿದ್ದಾರೆ. ಅವರಿಗೆ ಸ್ವಲ್ಪವಾದರೂ ನೈತಿಕತೆ ಇದ್ದರೆ ಈ ಘಟನೆಗೆ ಸಂಬಂಧಿಸಿದಂತೆ ಉಗ್ರ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಪೊಲೀಸರಿಗೆ ತಾಕೀತು ಮಾಡಲಿ ಮತ್ತು ತಮ್ಮ ಪಕ್ಷದ ಶಾಸಕರನ್ನ ಪಕ್ಷದಿಂದ ಉಚ್ಚಾಟನೆ ಮಾಡಲಿ ಎಂದು ಭಾಸ್ಕರ್ ಪ್ರಸಾದ್ ತಮ್ಮ ಪ್ರಕಟಣೆಯ ಮೂಲಕ ಸವಾಲು ಹಾಕಿದ್ದಾರೆ.
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…
ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್…