ಬೆಂಗಳೂರು, 27 ಜನವರಿ 2024: ತೀರ್ಥಹಳ್ಳಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಣೆಯ ಕಾರ್ಯಕ್ರಮದಲ್ಲಿ ಅತಿಥಿಗಳಿಗೆ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಭಗವದ್ಗೀತೆ ಹಂಚಿಕೆ ನಡೆದಿದೆ. ಅಲ್ಲದೆ ಆ ಕಾರ್ಯಕ್ರಮಕ್ಕೆ ಅತಥಿಯಾಗಿ ಆಗಮಿಸಿ ಮಾತನಾಡಿದ ಹಿರಿಯ ವ್ಯವಹಾರಿಕ (ದಿವಾಣೆ) ನ್ಯಾಯಾಧೀಶರಾದ ಶ್ರೀ ಎಸ್ ಎಸ್ ಭರತ್ ಅವರು ಭಗವದ್ಗೀತೆ ಸಂವಿಧಾನಕ್ಕೆ ಸಮನಾದ ಕೃತಿ ಎಂದರಲ್ಲದೆ ತಮ್ಮ ಭಾಷಣದ ಕೊನೆಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. 75ನೇ ಗಣರಾಜ್ಯೋತ್ಸವದ ಮುನ್ನಾದಿನ ನಡೆದಿರುವ ಈ ಘಟನೆಗಳು ನಮ್ಮ ದೇಶದ ಸಂವಿಧಾನಕ್ಕೆ ಮಾಡಿರುವ ಅಪಮಾನ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್. ಭಾಸ್ಕರ್ ಪ್ರಸಾದ್ ತಮ್ಮ ಪತ್ರಿಕಾ ಪ್ರಕಟಣೆಯ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನ್ಯಾಯಾಧೀಶರು ಸಂವಿಧಾನ ಎತ್ತಿಹಿಡುಯುವುದರಲ್ಲಿ ಮೊದಲಿಗರಾಗಿರಬೇಕು. ಸಂವಿಧಾನಕ್ಕೆ ಧಕ್ಕೆಯಾಗುವಂತೆ ನಡೆದುಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆದರೆ ಅವರೇ ಈ ರೀತಿ ನಡೆದುಕೊಂಡರೆ ಯಾರಲ್ಲಿ ದೂರುವುದು ಎಂದು ಭಾಸ್ಕರ್ ಪ್ರಸಾದ್ ಪ್ರಶ್ನಿಸಿದ್ದಾರೆ. ಇನ್ನು ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ವತಿಯಿಂದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅತಿಥಿಗಳಿಗೆ ಭಗವದ್ಗೀತೆ ಹಂಚಿಕೆ ನಡೆದಿರುವುದು ಅಕ್ಷಮ್ಯ. ಅದೂ ವಿದ್ಯಾರ್ಥಿಗಳು ನೆರೆದಿದ್ದ ಕಾರ್ಯಕ್ರಮದಲ್ಲಿ ಇಂತಹ ಕೃತ್ಯ ಎಸಗಿರುವುದು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಮತಾಂಧತೆಯನ್ನು ಬಿತ್ತುವ ಪ್ರಯತ್ನವಾಗಿರುತ್ತದೆ. ಇದಕ್ಕೆ ಕಾರಣರಾದ ತಹಶೀಲ್ದಾರ್ ಹಾಗೂ ತಾಲ್ಲೂಕು ಕಾರ್ಯನಿರ್ವಾಹಕ ದಂಡಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ಭಾಸ್ಕರ್ ಪ್ರಸಾದ್ ತಮ್ಮ ಪ್ರಕಟಣೆಯಲ್ಲಿ ಒತ್ತಾಯಿಸಿದ್ದಾರೆ.
ಒಂದೆಡೆ ಮೋದಿ ಸರ್ಕಾರ ಮಂದಿರ, ಹಿಂದುತ್ವದ ಹೆಸರಿನಲ್ಲಿ ದೇಶದ ಸಂವಿಧಾನದ ಮೇಲೆ ದಾಳಿ ನಡೆಸುತ್ತಿದೆ. ಜೊತೆಗೆ ಅಲ್ಪಸಂಖ್ಯಾತರಲ್ಲಿ ಭಯದ ವಾತಾವರಣ ಸೃಷ್ಟಿಮಾಡುತ್ತಿದೆ. ಅದೇ ಸಂದರ್ಭದಲ್ಲಿ ಕರ್ನಾಟಕದ ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಲಾಭಕ್ಕಾಗಿ ರಾಮ ಜಪ ಮಾಡುತ್ತ, ಬಾಬರಿ ಮಸೀದಿಯ ನೋವನ್ನು ವ್ಯಕ್ತಪಡಿಸುವವರನ್ನು ಬಂಧಿಸುವ ಕಾರ್ಯದಲ್ಲಿ ನಿರತವಾಗಿದೆ. ಇದರಿಂದ ಪ್ರೇರಿತರಾದ ಅಧಿಕಾರ ವರ್ಗ ತಮ್ಮ ಧರ್ಮಾಧಾರಿತ ತಾರತಮ್ಯದ ಚಟುವಟಿಕೆಗಳನ್ನು ನಡೆಸಲು ಹುಮ್ಮಸ್ಸು ಗಳಿಸಿಕೊಳ್ಳುತ್ತಿದೆ. ಇದು ಈ ದೇಶಕ್ಕೆ ಅತ್ಯಂತ ಮಾರಕ ಫಲಿತಾಂಶಗಳನ್ನು ನೀಡಲಿದೆ ಎಂದು ಭಾಸ್ಕರ್ ಪ್ರಸಾದ್ ತಮ್ಮ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…
ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್…