ಗುಲಬರ್ಗಾ: 22 ಡಿಸೆಂಬರ್ 2024.
ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ ಜಿಲ್ಲಾ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಸೈಯದ್ ದಸ್ತಗೀರ್ ರವರ ಅಧ್ಯಕ್ಷತೆಯಲ್ಲಿ ಮತ್ತು ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ರವರ ಉಪಸ್ಥಿತಿಯಲ್ಲಿ ಜರುಗಿತು.
ಈ ಸಭೆಯಲ್ಲಿ ಗುಲಬರ್ಗಾ ಜಿಲ್ಲೆಯ ವಿವಿಧ ಮುಖ್ಯವಾದ ವಿಷಯಗಳು ಚರ್ಚಿಸಲ್ಪಟ್ಟವು.
ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿ , ಗುಲ್ಬರ್ಗದ 371 ಹಾಸಿಗೆಯ ಜಯದೇವ ಆಸ್ಪತ್ರೆಯ ಸ್ವಂತ ಕಟ್ಟಡ ಉದ್ಘಾಟನೆಗಾಗಿ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಡೆಯನ್ನು ಸ್ವಾಗತಿಸಿದರು.
ಈ ಆಸ್ಪತ್ರೆಯು ಕಲ್ಯಾಣ ಕರ್ನಾಟಕದ ಜನರ ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬಹುದು ಎಂಬ ಭರವಸೆ ವ್ಯಕ್ತಪಡಿಸಿದರು, ಏಕೆಂದರೆ ಜನರು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಪ್ರಯಾಣ ಮಾಡಬೇಕಾಗುತ್ತಿತ್ತು. ಗುಲಬರ್ಗಾದಲ್ಲಿ ಇಂದಿರಾ ಗಾಂಧಿ ಮಕ್ಕಳ ಆಸ್ಪತ್ರೆಯ ಶಾಖೆಯನ್ನು ಸ್ಥಾಪಿಸಲು ಸರ್ಕಾರಕ್ಕೆ ಅವರು ಮನವಿ ಮಾಡಿದರು, ಇದು ಉತ್ತರ ಕರ್ನಾಟಕದ ಜನರ ಆರೋಗ್ಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯಕವಾಗುತ್ತದೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಇತ್ತೀಚಿನ ವಿವಾದಾತ್ಮಕ ಹೇಳಿಕೆಯನ್ನು ತೀವ್ರವಾಗಿ ವಿರೋಧಿಸಿದರು, ಅಂಬೇಡ್ಕರ್ ಹೆಸರನ್ನು ಹೆಚ್ಚಿನ ಬಾರಿ ಉಲ್ಲೇಖಿಸುತ್ತಿರುವ ಬಗ್ಗೆ ವ್ಯಂಗ್ಯವಾಡಿದ ಶಾ ಅವರ ಹೇಳಿಕೆಯನ್ನು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದಲ್ಲಿ ನಿರ್ಧಿಷ್ಟಗೊಳಿಸಲಾದ ಸಮಾನತೆ ಮತ್ತು ನ್ಯಾಯದ ಮೌಲ್ಯಗಳಿಗೆ ಅವಮಾನ ಎಂದು ಖಂಡಿಸಿದರು.
ಅಫ್ಸರ್ ಕೊಡ್ಲಿಪೇಟೆ, ಶೋಷಿತ ಸಮುದಾಯಗಳ ಮುಕ್ತಿಗಾಗಿ ಅಂಬೇಡ್ಕರ್ ಅವರ ಪಾತ್ರವನ್ನು ಪುನರುಚ್ಚರಿಸಿದರು ಮತ್ತು ಅವರ ಹೆಸರು ಉಚ್ಚರಿಸುವುದು ಸಮಾನತೆ ಮತ್ತು ನ್ಯಾಯಕ್ಕಾಗಿ ಹೋರಾಟವನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದರು. ಅವರು, ಡಾ. ಅಂಬೇಡ್ಕರ್ ವಿರೋಧಿಸಿದ ಮಾನವತೆಯನ್ನು ವಿರೋಧಿಸುವ ಮನುಸ್ಮೃತಿಯನ್ನು ಪುನಃಜೀವಿತಗೊಳಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಅಮಿತ್ ಶಾ ದೇಶದ ಜನರಿಗೆ ಕ್ಷಮೆಯಾಚಿಸಬೇಕೆಂದು ಒತ್ತಾಯಿಸುತ್ತಾ, 24 ಡಿಸೆಂಬರ್ 2024 ರಂದು ನಡೆಯುವ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ ನೀಡುವುದಾಗಿ ಘೋಷಿಸಿದರು.
ಸಭೆಯ ಕೊನೆಯ ಭಾಗದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಅಬ್ದುಲ್ ರಹೀಮ್ ಪಟೇಲ್, ಡಾ. ರಿಜ್ವಾನ್ ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೈಯದ್ ಅಲೀಮ್ ಇಲಾಹಿ, ಜಿಲ್ಲಾ ಸಮಿತಿ ಸದಸ್ಯ ಮೊಹಮ್ಮದ್ ಮೊಹ್ಸಿನ್ ಮತ್ತು ಇತರ ಜಿಲ್ಲಾ ಸಮಿತಿಯ ಸದಸ್ಯರು ಹಾಜರಿದ್ದರು.
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್‌ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…
TWITTER CAMPAIGN ON 20 | 07 | 2025 | SUNDAY | TIME : 4:00 PM…
ایس ڈی پی آئی دیون ملی کے کسانوں کی کامیابی کا خیر مقدم کرتی ہے۔…