ಮೈಸೂರು, 03 ಜುಲೈ 2025: ರಾಜ್ಯ ಚುನಾವಣಾ ಉಸ್ತುವಾರಿ ಹಾಗೂ ರಾಜ್ಯ ಪ್ರಧಾನ
ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ರವರ ಮಾರ್ಗದರ್ಶನದಲ್ಲಿ ಹಾಗೂ ರಾಜ್ಯ ERM ಉಸ್ತುವಾರಿಯಾದ ಅಬ್ರಾರ್ ಅಹ್ಮದ್ ರವರ ಅಧ್ಯಕ್ಷತೆಯಲ್ಲಿ ಮೈಸೂರಿನ ಪಕ್ಷದ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾಯಿತ ಜನಪ್ರತಿನಿಧಿಗಳ ಮೇಲುಸ್ತುವಾರಿಗಳ (ERM) ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಫ್ಸರ್ ಕೊಡ್ಲಿಪೇಟೆ ಅವರು “ಪಕ್ಷದ ರಾಜಕೀಯ ಶಕ್ತಿ ಬಲಪಡಿಸಲು ಮತ್ತು ಸಾರ್ವತ್ರಿಕ ಬೆಂಬಲ ಪಡೆಯಲು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಪ್ರಮುಖ ಹಂತವಾಗಿವೆ. ಈ ಹಿನ್ನಲೆಯಲ್ಲಿ ಚುನಾಯಿತ ಪ್ರತಿನಿಧಿಗಳಾಗಿರುವ SDPI ಪಕ್ಷದ ಹೋರಾಟಗಾರರ ಜವಾಬ್ದಾರಿ ಬಹಳ ಹೆಚ್ಚಾಗಿರುತ್ತದೆ. ರಾಜಕೀಯ ಬದ್ಧತೆ ಮತ್ತು ಕಠಿಣ ಪರಿಶ್ರಮದ ಮೂಲಕ ಈ ರಾಜಕೀಯ ಚಳುವಳಿಯನ್ನು “ಜನಾಧಿಕಾರದ ಕಡೆಗೆ” ಮುನ್ನಡೆಸುವ ಮಹತ್ವದ ಪಾತ್ರ ಚುನಾಯಿತ ಜನಪ್ರತಿನಿಧಿಗಳು ನಿಭಾಯಿಸಬೇಕಿದೆ ಎಂದು ಹಿತವಚನ ನುಡಿದರು.
ಸಭೆಯಲ್ಲಿ ಮಾತನಾಡಿದ ಅಬ್ರಾರ್ ಅಹ್ಮದ್ ಅವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾಗಿರುವ SDPI ಪಕ್ಷದ ಪಾಲಿಕೆ ಸದಸ್ಯರ ಹಾಗೂ ಕೌನ್ಸಿಲರ್‌ಗಳ ಕಾರ್ಯಕ್ಷಮತೆ ಹೆಚ್ಚಿಸುವ ಮತ್ತು ಅವಲೋಕನ ನಡೆಸುವ ನಿಟ್ಟಿನಲ್ಲಿ ಜುಲೈ 24 ರಂದು ಮೈಸೂರಿನಲ್ಲಿ ಒಂದು ದಿನದ ವಿಶೇಷ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗಿರುವ ಕುರಿತು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ವಿವಿಧ ಜಿಲ್ಲೆಗಳ ಚುನಾಯಿತ ಜನಪ್ರತಿನಿದಿಗಳ ವ್ಯವಸ್ಥಾಪನ ಸಮಿತಿಯ ಉಸ್ತುವಾರಿಗಳು ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಮೈಸೂರು
ನಾನು ಸ್ವತಂತ್ರನಾಗಿದ್ದೆ, ನಾನು ಸ್ವತಂತ್ರನಾಗಿದ್ದೇನೆ ಮತ್ತು ನಾನು ಸ್ವತಂತ್ರನಾಗಿಯೇ ಇರುತ್ತೇನೆ!" ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದ ಅಮರ ಹುತಾತ್ಮ…
The Social Democratic Party of India (SDPI) staged a protest in Gulbarga against the ongoing…
Bangalore, 21 July: Dharmasthala mein 100 se ziyada ladkiyon aur khawateen ki mashkook maut, zyadaati…
ಬೆಂಗಳೂರು: ಜುಲೈ 21 ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಮತ್ತು ಮಹಿಳೆಯರ ಅಸಹಜ ಸಾವುಗಳು, ಹೊರಬಂದು ಅತ್ಯಾಚಾರ ಹಾಗೂ ಕೊಲೆ ಶಂಕಿತ…