ಪತ್ರಿಕಾ ಪ್ರಕಟಣೆಚುನಾವಣಾ ಪೂರ್ವ ತಯಾರಿಗಳ ಬಗ್ಗೆ ಕೊಪ್ಪಳ ಜಿಲ್ಲಾ ಮತ್ತು ವಿಧಾನಸಭಾ ನಾಯಕರ ವಿಶೇಷ ಸಭೆ*ಗಂಗಾವತಿ:ಜುಲೈ 8: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿಯ ವಿಶೇಷ ಸಭೆಯು ಜಿಲ್ಲಾಧ್ಯಕ್ಷರಾದ ಸಲೀಂ ಮನಿಯಾರ್ ರವರ ಅಧ್ಯಕ್ಷತೆಯಲ್ಲಿ ರಾಜ್ಯ ಉಪಾಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಖಜಾಂಚಿ ಅಮ್ಜದ್ ಖಾನ್ ರವರ ಸಮ್ಮುಖದಲ್ಲಿ ನಡೆಯಿತು. ಜಿಲ್ಲಾ, ವಿಧಾನಸಭಾ ಮತ್ತು ವಿವಿಧ ಹಂತದ ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ನಾಯಕರು ಮುಂಬರಲಿರುವ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಗಳ ಪೂರ್ವ ತಯಾರಿಗಳ ಬಗ್ಗೆ, ವಾರ್ಡ್ ಹಾಗೂ ಬೂತ್ ಮಟ್ಟದ ಸಂಘಟನಾ ಸ್ಥಿತಿಗತಿಯ ಕುರಿತು ವಿಶ್ಲೇಷಣೆ, ಕಾರ್ಯತಂತ್ರಗಳ ವಿವಿಧ ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಬಗ್ಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, “ಪ್ರತಿಯೊಬ್ಬನೂ ಚುನಾವಣಾ ಕಾರ್ಯಗಳತ್ತ ಹೆಚ್ಚು ಕಾಳಜಿಯಿಂದ ನಿರತರಾಗಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವುದು ನಮ್ಮ ಮೇಲೆ ಇರುವ ಪ್ರಮುಖ ಜವಾಬ್ದಾರಿ. ಸ್ಥಳೀಯ ಸಂಸ್ಥೆ ಚುನಾವಣೆಯ ವಿಳಂಬವು ಮತ್ತು ಸರ್ಕಾರದ ನಿರ್ಲಕ್ಷ್ಯವೂ ಪ್ರಜಾಪ್ರಭುತ್ವದ ಅಪಮಾನ” ಎಂದು ಅಭಿಪ್ರಾಯಪಟ್ಟರು . ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, “ಪಕ್ಷವನ್ನು ಬೂತ್ ಮಟ್ಟದ ಬಲಗೊಳಿಸುವುದು ಅವಶ್ಯಕ. ಪ್ರತಿಯೊಬ್ಬ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷವಾಕ್ಯದಡಿಯಲ್ಲಿ ತಕ್ಕ ರೀತಿಯಲ್ಲಿ ಕೆಲಸ ಮಾಡಬೇಕು” ಎಂದು ಕರೆ ನೀಡಿದರು.ಸಭೆಯ ಅಂತಿಮ ಭಾಗದಲ್ಲಿ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ನಾಯಕರು ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ಕಾರ್ಯತಂತ್ರ, ಯೋಜಿತ ಚಟುವಟಿಕೆಗಳ ಬಗ್ಗೆ ಆಳವಾದ ಚರ್ಚೆ ನಡೆಸಿ, ಮುಂದಿನ ಹಂತದ ಕಾರ್ಯತೀರ್ಮಾನಗಳನ್ನು ಕೈಗೊಳ್ಳಲಾಯಿತು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಯೂಸುಫ್ ಮೋದಿ, ಜಿಲ್ಲಾ ಪ್ರದಾನ ಕಾರ್ಯದರ್ಶಿ ಸೈಯದ್ ಶಾಕೀಬ್, ಜಿಲ್ಲಾ ಕಾರ್ಯದರ್ಶಿ ಚಾಂದ್, ಜಿಲ್ಲಾ ಕೋಶಾಧಿಕಾರಿ ಮಹೇಬೂಬ್ ರಜಾ, ಗಂಗಾವತಿ ವಿಧಾನ ಸಭಾ ಅಧ್ಯಕ್ಷರು ಇರ್ಫಾನ್, ಕೊಪ್ಪಳ ವಿಧಾನಸಭಾ ಅಧ್ಯಕ್ಷರು ಸಲೀಮ್ ಖಾದ್ರಿ, ಕನಕಗಿರಿ ವಿಧಾನಸಭಾ ಅಧ್ಯಕ್ಷರು ಅಜ್ಮಿರ್ ಸಿಂಗನಾಳ್,ಕುಷ್ಟಗಿ ವಿಧಾನಸಭಾ ಉಪಾಧ್ಯಕ್ಷರು ಸಲೀಮ್ ಕೆ ಬಿ, ಸಿಂದನೂರ್ ವಿಧಾನಸಭಾ ಅಧ್ಯಕ್ಷರು ಆಸೀಫ್ ಕೆ, ಕಂಪ್ಲಿ ವಿಧಾನಸಭಾ ಅಧ್ಯಕ್ಷರು ಇಮ್ರಾನ್ ಉಪಸ್ಥಿತರಿದ್ದರು.

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

3 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

3 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

3 days ago

79 ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

"ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ" ಈ ಸ್ವಾತಂತ್ರ್ಯ ದಿನದಂದು, ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಸತ್ಯವನ್ನು ಮಾತನಾಡಲು ಧೈರ್ಯ ಮಾಡಿದ…

3 days ago