Categories: featureNewsPolitics

ಎಂಸಿಸಿ ಚುನಾವಣಾ ಸಂಬಂಧಿಸಿ SDPI ಮೈಸೂರು ಜಿಲ್ಲಾ ನಾಯಕರೊಂದಿಗೆ ಚುನಾವಣೆ ಪೂರ್ವ ತಯಾರಿ ಸಭೆ

ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು

ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ನಾಯಕರ ವಿಶೇಷ ಸಭೆ ಇಂದು ಮೈಸೂರಿನಲ್ಲಿ ಜರುಗಿತು. ಸಭೆಗೆ ಜಿಲ್ಲಾಧ್ಯಕ್ಷ ರಫತ್ ಖಾನ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಹಾಗೂ ಎಂಸಿಸಿ ಚುನಾವಣೆ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಪ್ಪರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ (ಕೆ.ಆರ್.ನಗರ) ಮತ್ತು ಅಕ್ರಮ್ ಮೌಲಾನಾ, ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್ ಅವರುಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ವಿಶೇಷವಾಗಿ ಮೈಸೂರು ಎಂಸಿಸಿ ಚುನಾವಣೆಗಳ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.

ಸಭೆಯಲ್ಲಿ ಸಂಘಟನಾ ಸ್ಥಿತಿಗತಿ, ಬೂತ್ ಹಾಗೂ ವಾರ್ಡ್ ಮಟ್ಟದ ಕಾರ್ಯಯೋಜನೆ, ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ವಿಶ್ಲೇಷಣೆ ನಡೆಯಿತು. ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಅವರು ಮಾತನಾಡುತ್ತಾ, “ ಸ್ಥಳೀಯ ಸಂಸ್ಥೆ ಚುನಾವಣೆಗಳ ವಿಳಂಬ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ನಾವು ಬಲಿಷ್ಠ ಉತ್ತರ ನೀಡಬೇಕು,” ಎಂದರು. ಅಪ್ಪರ್ ಕೊಡ್ಲಿಪೇಟೆ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ, “ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆ SDPIಗೆ ಪ್ರಮುಖ ಆಯಾಮ. ಪ್ರತಿ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷಣೆಯಡಿ ನಿರಂತರ ಶ್ರಮಿಸಬೇಕು” ಎಂದು ಕಿವಿಮಾತು ಹೇಳಿದರು. ಸಭೆಯ ಅಂತಿಮದಲ್ಲಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ತಂತ್ರ ಹಾಗೂ ಮುಂದಿನ ಹಂತದ ಚಟುವಟಿಕೆಗಳಿಗೆ ತೀರ್ಮಾನ ಕೈಗೊಳ್ಳಲಾಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಹಾಗೂ ಮುಖ್ಯ ನಾಯಕರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಕರ್ನಾಟಕ

SDPIKarnataka #Mysore #MCC

admin

Recent Posts

ಜ್ಞಾನೇಶ್‌ ಅವರನ್ನು ವಜಾಗೊಳಿಸಿ!SIR ಅನ್ನು ರದ್ದುಗೊಳಿಸಿ

ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಮತದಾನದ ಹಕ್ಕು, ನಮ್ಮ ಪ್ರಜಾಪ್ರಭುತ್ವದ ಆತ್ಮ ಇಂದು ಅಪಾಯದಲ್ಲಿದೆ ಚುನಾವಣಾ ಆಯೋಗವು ಜಾರಿಗೆ ತಂದಿರುವ…

2 days ago

SACK GYANESH KUMAR SCRAP SIR

October 8 | 10:30AM Onwards Freedom Park, Bengaluru MASS PROTEST & STATE-LEVEL PEOPLE'S TRIBUNAL ON…

3 days ago

ಗ್ಯಾನೇಶ್ ಅನ್ನು ವಜಾಗೊಳಿಸಿ

SIR ರದ್ದುಗೊಳಿಸಿ ಅಕ್ಟೋಬರ್ 8 | ಬೆಳಗ್ಗೆ 10:30 ರಿಂದ ಫ್ರೀಡಂ ಪಾರ್ಕ್, ಬೆಂಗಳೂರು ಬೃಹತ್‌ ಪ್ರತಿಭಟನೆ ಹಾಗೂ SIR…

3 days ago

ಗಾಂಧಿ ಜಯಂತಿಯ ಹಾರ್ದಿಕ ಶುಭಾಶಯಗಳು

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜಯಂತಿಯಂದು ದೇಶದ ಎಲ್ಲ ಜನತೆಗೆ ಹೃತ್ಪೂರ್ವಕ ಶುಭಾಶಯಗಳು. ಗಾಂಧೀಜಿ ಕಂಡ ಭಾರತ ಸರ್ವಾಧಿಕಾರದ ಭಾರತವಾಗಿರಲಿಲ್ಲ.…

1 week ago