ಗದಗ, 30 ಆಗಸ್ಟ್ 2025:ಗದಗ ಜಿಲ್ಲಾ ಘಟಕದ ವತಿಯಿಂದ ನಡೆದ ನಾಯಕರ ಸಭೆಯಲ್ಲಿ ಮುಖ್ಯ ಅತಿಥಿಯಾಗಿ
ಪಾಲ್ಗೊಂಡ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರು ಜನಪರ ಹೋರಾಟದ ಬಲವಾದ ಸಂದೇಶವನ್ನು ಸಾರಿದರು.ಮುಖ್ಯ ಭಾಷಣ ಮಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪಕ್ಷವನ್ನು ರಾಜಕೀಯವಾಗಿ ಬಲಿಷ್ಠಗೊಳಿಸುವ ಸಂಕಲ್ಪಕ್ಕೆ ಕರೆ ನೀಡಿದರು.
ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎಂಬುದರ ಬಗ್ಗೆ ಗಂಭೀರ ಚರ್ಚೆ ಅಗತ್ಯ. ಬೂತ್ ಮಟ್ಟದ ಕಾರ್ಯಕರ್ತರ ಸಭೆಗಳನ್ನು ಆಯೋಜಿಸಿ ಬೂತ್ ಸಮಿತಿಗಳನ್ನು ಬಲಪಡಿಸುವ ಮೂಲಕ ತಕ್ಷಣವೇ ಚುನಾವಣಾ ಚಟುವಟಿಕೆಗಳಿಗೆ ಚುರುಕು ನೀಡಬೇಕು. “ನಮ್ಮ ಕೆಲಸ-ಕಾರ್ಯಗಳು ಸಮಾಜದಲ್ಲಿ ಬದಲಾವಣೆ ತರಲು, ನಿಜವಾದ ಮಾನವೀಯತೆಯ ಮೌಲ್ಯಗಳನ್ನು ಬೋಧಿಸಲು ಮತ್ತು ಸೃಷ್ಟಿಕರ್ತನ ಸಂತೃಪ್ತಿಗೆ ಕಾರಣವಾಗಬೇಕು. ಪ್ರತಿಯೊಬ್ಬರೂ ತಮ್ಮ ಹೊಣೆಗಾರಿಕೆಯನ್ನು ಅರಿತು ಸಮಾಜವನ್ನು ಉತ್ತಮ ದಿಕ್ಕಿನಲ್ಲಿ ಮುನ್ನಡೆಸುವುದು ನಮ್ಮ ಕರ್ತವ್ಯ. ಇಂತಹ ಕಾರ್ಯಗಳು ಉತ್ತಮ ಭವಿಷ್ಯಕ್ಕಾಗಿ ಅತ್ಯಂತ ಮುಖ್ಯ.”
“ನಮ್ಮ ಪೂರ್ವಜರ ತ್ಯಾಗ ಮತ್ತು ಹೋರಾಟಗಳ ಫಲವಾಗಿ ನಾವು ಗೌರವದ ಬದುಕು ನಡೆಸುತ್ತಿದ್ದೇವೆ. ಆದರೆ ಇನ್ನೂ ಸಾವಿರಾರು ಹಿಂದುಳಿದವರು, ಅಲ್ಪಸಂಖ್ಯಾತರು, ಶೋಷಿತರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಮತ್ತು ನಾಯಕರು ಪೋಲಿಸರ ಲಾಠಿ ಹೊಡೆತ, ಸುಳ್ಳು ಪ್ರಕರಣಗಳು, ಬಂಧನಗಳನ್ನು ಎದುರಿಸುತ್ತಿದ್ದಾರೆ. ಇದೇ ಅವರ ಬದ್ಧತೆಯ ಸಾಕ್ಷಿ. SDPI ಕೇವಲ ರಾಜಕೀಯ ಪಕ್ಷವಲ್ಲ; ಇದು ಶೋಷಿತರ ಕೂಗಿನ ಪ್ರತಿಧ್ವನಿ, ನ್ಯಾಯ-ಸಮಾನತೆ-ಸೌಹಾರ್ದದ ಹಾದಿಯಲ್ಲಿ ಸಾಗುವ ಚಳವಳಿ.” ಎಂದು ಅಭಿಪ್ರಾಯಪಟ್ಟರು.
ಸಭೆಯ ಪ್ರಮುಖ ಅಂಶಗಳು: ರೈತರ ಸಂಕಷ್ಟ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ಗಂಭೀರ ವಿಷಯಗಳ ಕುರಿತು ಚರ್ಚೆ.ತಾಲೂಕು ಹಾಗೂ ಜಿಲ್ಲಾ ಮಟ್ಟದ ನಾಯಕರಿಂದ ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಸ್ಪಷ್ಟ ಪ್ರಸ್ತಾವನೆ.ಮುಂಬರುವ ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲೆ ಪಂಚಾಯತ್ ಚುನಾವಣೆಯ ತಯಾರಿ, ನಿಧಿ ಸಂಗ್ರಹಣಾ ಅಭಿಯಾನ ಹಾಗೂ ಸಂಘಟನಾ ಚಟುವಟಿಕೆಗಳ ಕುರಿತು ವಿಸ್ತ್ರತ ಚರ್ಚೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಬಿಲಾಲ್ ಅವರು ಚುನಾವಣಾ ತಂತ್ರ, ಬಲಿಷ್ಠ ಸಂಘಟನೆ ನಿರ್ಮಾಣ ಮತ್ತು ನಿಧಿ ಸಂಗ್ರಹಣೆಯ ಅಗತ್ಯತೆ ಕುರಿತು ಕಾರ್ಯಕರ್ತರಿಗೆ ಮಾರ್ಗದರ್ಶನ ನೀಡಿದರು. ಸಭೆಯಲ್ಲಿ ಹಾಜರಿದ್ದ ಪ್ರಮುಖರು ಪ್ರಧಾನ ಕಾರ್ಯದರ್ಶಿಗಳಾದ ಅಫ್ಘಾನ್ ಮತ್ತು ಅನ್ವರ್ ಬಾಗೇವಾಡಿ, ಹಿದಾಯತ್ ಚಾಚಾ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರು, ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು, ಜೊತೆಗೆ ವಿಮೆನ್ ಇಂಡಿಯಾ ಮೂಮೆಂಟ್ ನ ನಾಯಕಿಯರು ಸಕ್ರಿಯವಾಗಿ ಭಾಗವಹಿಸಿದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಗದಗ
ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…
کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…
ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…
عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…