07
Oct

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ಬಲವಾಗಿ ಖಂಡಿಸುತ್ತದೆ ಹಾಗೂ ಅಪರಾಧಿ ವಕೀಲನಾದ ರಾಕೇಶ್ ಕಿಶೋರ್ ನಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸುತ್ತದೆ.

ಸನಾತನ ಧರ್ಮವನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗುತ್ತಾ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಒಬ್ಬ ವಕೀಲನಾಗಿ ಈ ರೀತಿ ದೇಶವೇ ತಲೆತಗ್ಗಿಸುವ ಕಾರ್ಯ ಎಸಗಿರುವುದು ಇತ್ತೀಚಿನ ದಿನಗಳಲ್ಲಿ ಸಂಘಪರಿವಾರದ ನಾಯಕರು ಹಾಗೂ ಬಿಜೆಪಿಯ ನಾಯಕರು ಬಹಿರಂಗವಾಗಿ ಕೋಮುಪ್ರಚೋದಿತ ಹೇಳಿಕೆಗಳು ನೀಡಿರುವುದೇ ಇಂತಹ ಘಟನೆಗಳು ನಡೆಯಲು ಕಾರಣ ಎಂದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.

ಕೇಂದ್ರ ಸರಕಾರವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥ ವಕೀಲನನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಇದಕ್ಕೆ ಪ್ರಚೋದನೆ ನೀಡಿದವರನ್ನು ಕೂಡ ಬಂಧಿಸ ಬೇಕು ಹಾಗೂ ಮುಖ್ಯ ನ್ಯಾಯ ಮೂರ್ತಿಗಳಾದ ಬಿ.ಆರ್ ಗವಾಯಿ ಅವರಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಆಗ್ರಹಿಸುತ್ತದೆ.

~ಮುಜಾಹಿದ್ ಪಾಷಾ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್‌ಡಿಪಿಐ ಕರ್ನಾಟಕ

SDPIKarnataka

Leave A Comment