ಹುಬ್ಬಳ್ಳಿ, 15-11-2025: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್ ಅವರ ಅಧ್ಯಕ್ಷತೆಯಲ್ಲಿ ಇಂದು ಹುಬ್ಬಳ್ಳಿಯಲ್ಲಿ ಉತ್ತರ ಕರ್ನಾಟಕ ಭಾಗದ ವಿವಿಧ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರು ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಅಬ್ದುಲ್ ಹನ್ನಾನ್ ರವರು ಮುಂಬರುವ ಚುನಾವಣೆಗಳ ತಯಾರಿ, ಸಾಮಾಜಿಕ ಸಮಸ್ಯೆಗಳ ಗುರುತುಪಡಿಸುವುದು ಮತ್ತು ಅವುಗಳಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ವಿಷಯಗಳನ್ನು ಪ್ರಸ್ತಾಪಿಸಿ ಚರ್ಚಿಸಿದರು. ಪಕ್ಷವನ್ನು ಬಲಪಡಿಸುವುದು, ಬೂತ್ ಮಟ್ಟದ ಚಟುವಟಿಕೆಗಳನ್ನು ವೇಗಗೊಳಿಸುವುದು ಮತ್ತು ಜನಸಂಪರ್ಕ ಕಾರ್ಯಕ್ರಮಗಳನ್ನು ಹೆಚ್ಚಿಸುವ ಕುರಿತು ಮಾರ್ಗದರ್ಶನ ನೀಡಿದರು.
ಉತ್ತರ ಕರ್ನಾಟಕದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ತಮ್ಮ ತಮ್ಮ ಜಿಲ್ಲೆಗಳ ಪಕ್ಷದ ಕಾರ್ಯಗಳ ಪ್ರಗತಿ ಹಾಗೂ ಎದುರಿರುವ ರಾಜಕೀಯ ಸವಾಲುಗಳನ್ನು ಸಭೆಯಲ್ಲಿ ಹಂಚಿಕೊಂಡರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹೀದ್ ಪಾಷಾ ರವರು ಪರಿಣಾಮಕಾರಿ ಕಾರ್ಯವೈಖರಿ, ಜನಸಂಪರ್ಕ ಮತ್ತು ವಿಷಯಾಧಾರಿತ ಚಳುವಳಿಗಳ ಮಹತ್ವವನ್ನು ಒತ್ತಿಹೇಳಿದರು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟು ಪಕ್ಷದ ಚಟುವಟಿಕೆಗಳನ್ನು ಇನ್ನಷ್ಟು ವೇಗಗೊಳಿಸುವ ಅಗತ್ಯವಿದೆ ಎಂದು ಒತ್ತಿ ಹೇಳಿದರು. ಸಭೆಯ ಅಂತ್ಯದಲ್ಲಿ, ಪಕ್ಷದ ಧೈಯವನ್ನು ಏಕತೆ, ಶಿಸ್ತು ಮತ್ತು ಸಮರ್ಪಣೆಯೊಂದಿಗೆ ಮುನ್ನಡೆಸುವ ಸಂಕಲ್ಪ ವ್ಯಕ್ತಪಡಿಸಲಾಯಿತು. ರಾಜ್ಯ ಕಾರ್ಯದರ್ಶಿ ಅಪ್ಸರ್ ಕೆ.ಆರ್.ನಗರ ಸಹ ಸಭೆಯಲ್ಲಿ ಉಪಸ್ಥಿತರಿದ್ದರು.
