ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು.
ಬೆಂಗಳೂರು ಕೋಗಿಲು ಬಡಾವಣೆಯ ವಸತಿಹೀನ ಬಡ ಜನರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸಿ ಅವರನ್ನು ವಸತಿ ಹಾಗೂ ಭೂಹೀನರನ್ನಾಗಿಸಿದ ಕಾಂಗ್ರೆಸ್ ಸರ್ಕಾರದ ನಡೆ ಮಾನವೀಯತೆಯ ವಿರುದ್ಧದ ಕ್ರೂರ ಕೃತ್ಯ ಎಂದು ತೀವ್ರವಾಗಿ ಖಂಡಿಸಿದರು. ದೇವರಾಜ ಅರಸು ಅವರು ಭೂ ಸುಧಾರಣೆ ಮತ್ತು ಮೀಸಲಾತಿಯ ಮೂಲಕ ಸಾಮಾಜಿಕ ನ್ಯಾಯದ ಇತಿಹಾಸ ನಿರ್ಮಿಸಿದರೆ, ಅದೇ ಅರಸು ಅವರ ಪರಂಪರೆಯನ್ನು ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಗಿಲು ನಿರಾಶ್ರಿತರ ಮೇಲೆ ದೌರ್ಜನ್ಯ ಎಸಗಿ ಸಾಧನೆ ಮೆರೆದಿದ್ದಾರೆ ಎಂದು ಎಸ್ ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಪ್ಸರ್ ಕೊಡ್ಲಿಪೇಟೆ ವ್ಯಂಗ್ಯವಾಗಿ ಮಾತಾಡಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ 2ಬಿ ಮೀಸಲಾತಿಯನ್ನು ಎರಡುವರೆ ವರ್ಷಗಳಾದರೂ ಮರುಸ್ಥಾಪನೆ ಮಾಡದೆ ಇರುವುದೂ ಈ ಸರ್ಕಾರದ ಜನವಿರೋಧಿ ಹಾಗೂ ದ್ವಂದ್ವ ನೀತಿಗೆ ಸ್ಪಷ್ಟ ಉದಾಹರಣೆಯಾಗಿದೆ. ಹಾಗೆಯೇ, ವಸತಿ ಒದಗಿಸುವುದು ಸರ್ಕಾರದ ಮೂಲ ಜವಾಬ್ದಾರಿಯಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ತಿಳಿಸಿದರು.
