ಲಿಯಾಕತ್ ಆಲಿ
- 3. 2026
ಕೊಡಗು ಜಿಲ್ಲೆಯ ಮಡಿಕೇರಿ ನಿವಾಸಿಯಾದ ಮಡಿಕೇರಿ ಹಿಂದಿನ ಪುರಸಭೆಯ ಮಾಜಿ ಉಪಾಧ್ಯಕ್ಷ ಲಿಯಾಕತ್ ಆಲಿ (69) ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಕೊಡಗಿನ ಹಿರಿಯ ಕಲಾವಿದರಾದ ಇವರು ಉತ್ತಮ ಗಾಯಕರಾಗಿದ್ದರು, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಸೇರಿದಂತೆ, ಹಲವು ಸ್ವಯಂ ಸೇವಾ ಸಂಘ ಸಂಸ್ಥೆಗಳಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದರು. ಗೋಕಾಕ್ ಚಳುವಳಿ ಸೇರಿದಂತೆ ಹಲವು ಕನ್ನಡಪರ ಚಳುವಳಿಯಲ್ಲಿ ಕೂಡ ಇವರು ಭಾಗಿಯಾಗಿದ್ದರು.
ಜಿಲ್ಲಾ ಜೆಡಿಎಸ್ ಪಕ್ಷದ ಪದಾಧಿಕಾರಿಯಾಗಿ, ಎಸ್ಡಿಪಿಐ ಪಕ್ಷದ ಜಿಲ್ಲಾ ಉಪಾಧ್ಯಕ್ಷರಾಗಿ ಕೂಡಾ ಸೇವೆ ಸಲ್ಲಿಸಿದ್ದಾರೆ. ಇವರು ಸರಳ ಸಜ್ಜನಿಕೆಯ ಸ್ನೇಹಜೀವಿಯಾಗಿದ್ದರು.
~ಅಪ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
