ದಿನಾಂಕ :20 ಮಾರ್ಚ : ದಾವಣಗೆರೆ: ದಾವಣಗೆರೆಯಲ್ಲಿ ನಡೆಯಲಿರುವ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷವು ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ತೀರ್ಮಾನಿಸಿದೆ.
ಈ ಸಂಬಂಧ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಬಗ್ಗೆ ಅಬ್ದುಲ್ ಹನ್ನಾನ್ (ರಾಜ್ಯ ಉಪಾಧ್ಯಕ್ಷರು) ಹಾಗೂ ಅಪ್ಪರ್ ಕೊಡ್ಲಿಪೇಟೆ (ರಾಜ್ಯ ಚುನಾವಣಾ ಉಸ್ತುವಾರಿ) ಅವರ ನೇತೃತ್ವದಲ್ಲಿ, ಸೈಯದ್ ಅಕ್ರಮ್ (ರಾಜ್ಯ ಕಾರ್ಯದರ್ಶಿ ಮತ್ತು ಜಿಲ್ಲಾ ಉಸ್ತುವಾರಿ) ಉಪಸ್ಥಿತಿಯಲ್ಲಿ ಜಿಲ್ಲಾ ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ಮುಖಂಡರೊಂದಿಗೆ ಸರಣಿ ಸಭೆಗಳು ನಡೆಯುತ್ತಿವೆ.
ಈ ಸಭೆಗಳಲ್ಲಿ ಕ್ಷೇತ್ರದ ರಾಜಕೀಯ ಪರಿಸ್ಥಿತಿ, ಸಂಘಟನಾ ಬಲವರ್ಧನೆ, ಮತದಾರರ ಅಭಿಪ್ರಾಯ ಸಂಗ್ರಹಣೆ ಹಾಗೂ ಅಭ್ಯರ್ಥಿ ಆಯ್ಕೆ ಕುರಿತಂತೆ ಸಮಗ್ರ ಚರ್ಚೆ ನಡೆಯಿತು. ಪಕ್ಷದ ತತ್ವ, ಜನಪರ ನಿಲುವು ಮತ್ತು ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಗೆಲುವಿಗೆ ತಕ್ಕ ಪ್ರಬಲ ಅಭ್ಯರ್ಥಿಯನ್ನು ಘೋಷಿಸಲು ತೀರ್ಮಾನ ಕೈಗೊಳ್ಳಲಾಗಿದೆ. ಎಸ್ಡಿಪಿಐ ಪಕ್ಷವು ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುವ, ಸಾಮಾಜಿಕ ನ್ಯಾಯದ ಪರ ನಿಲ್ಲುವ ನಾಯಕತ್ವವನ್ನು ಮುಂದಿಟ್ಟುಕೊಂಡು ಈ ಉಪಚುನಾವಣೆಯಲ್ಲಿ ಶಕ್ತಿಯುತವಾಗಿ ಸ್ಪರ್ಧಿಸಲು ಸಜ್ಜಾಗಿದೆ.
ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಈ ಸಭೆಯಲ್ಲಿ ರಾಜ್ಯ ಖಜಾಂಚಿ ಅಮ್ಮದ್ ಖಾನ್ ರಾಜ್ಯ ಸಮಿತಿ ಸದಸ್ಯರುಗಳಾದ ಫಯಾಜ್ ಅರಿಹಂತ್, ಅಬ್ರಾರ್ ಅಹ್ಮದ್, ಉಬೈದುಲ್ಲಾ ಕೆರೆಬಿಳ್ಳಿ ಹಾಗೂ ಜಿಲ್ಲಾಧ್ಯಕ್ಷರಾದ ತಾಹೀರ್ ಹುಸೇನ್, ಜಿಲ್ಲಾ ಉಪಾಧ್ಯಕ್ಷರಾದ ರಿಜ್ಜಿ ರಿಯಾಝ್ ಅಹ್ಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೌಸ್ ಪೀರ್, ಜಿಲ್ಲಾ ಸಮಿತಿ ಸದಸ್ಯರುಗಳು ಸೇರಿದಂತೆ ದಾವಣಗೆರೆ ವಿಧಾನಸಭಾ ಹಾಗೂ ಹರಿಹರ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರುಗಳಾದ ಉಪಸ್ಥಿತರಿದ್ದರು.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ
