ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ನೋಟಿಸ್ ಕಿತ್ತೆಸೆದು ಹಾಗೂ ಸರ್ಕಾರಿ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗುವುದು ಯಾವುದೇ ಜನಪ್ರತಿನಿಧಿಗೆ ಶೋಭೆ ತರುವ ನಡೆ ಅಲ್ಲ.
ಈ ಹಿನ್ನೆಲೆಯಲ್ಲಿ, ಮಾನ್ಯ ಚಿಕ್ಕಮಗಳೂರಿನ ಎಸ್ಪಿ ಅವರೇ, ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಆರೋಪದಡಿ ಶಾಸಕ ಸಿ.ಟಿ. ರವಿ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಅವರ ಬೆಂಬಲಿಗರ ವಿರುದ್ಧ ಕಾನೂನಿನ ಪ್ರಕಾರ ಸುಮೋಟೋ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ.
ಪ್ರಜಾಪ್ರಭುತ್ವದಲ್ಲಿ ಕಾನೂನಿನ ಗೌರವ ಎಲ್ಲರಿಗೂ ಒಂದೇ ಆಗಿರಬೇಕು. ಕಾನೂನು ಸಾಮಾನ್ಯ ನಾಗರಿಕರಿಗೆ ಒಂದು ರೀತಿಯಲ್ಲಿ,ಜನಪ್ರತಿನಿಧಿಗಳಿಗೆ ಮತ್ತೊಂದು ರೀತಿಯಲ್ಲಿ ಅನ್ವಯಿಸಬಾರದು, ಈ ಬಗ್ಗೆ ಕರ್ನಾಟಕದ ಡಿಜಿಪಿ ಅವರೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲು ಆಗ್ರಹಿಸುತ್ತೇನೆ.
~ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು, SDPI ಕರ್ನಾಟಕ
