Categories: featureNewsPolitics

SIR ವಿರೋಧಿ ಒಕ್ಕೂಟದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ

“ಕರ್ನಾಟಕ SIR: ದ್ರೋಹ ಮತ್ತು ಕಣ್ಣೀರ ಕಥನ” ಎಂಬ ಶೀರ್ಷಿಕೆಯಡಿ ಸಿದ್ಧಪಡಿಸಲಾದ ಪರಿಶೋಧನಾ ವರದಿಯನ್ನು SIR ವಿರೋಧಿ ಒಕ್ಕೂಟದ ನಿಯೋಗವು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಹಸ್ತಾಂತರಿಸಿತು.

ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ನೇತೃತ್ವದಲ್ಲಿ ನಿಯೋಗವು ಮುಖ್ಯಮಂತ್ರಿಗಳೊಂದಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಿಂದ ಉಂಟಾಗಿರುವ ಸಮಸ್ಯೆಗಳು, ಜನರ ಆತಂಕಗಳು ಹಾಗೂ ವರದಿಯಲ್ಲಿ ಉಲ್ಲೇಖಿಸಿರುವ ಆರೋಪಿತ ಅಕ್ರಮಗಳು ಮತ್ತು ಲೋಪಗಳ ಕುರಿತು ವಿವರವಾಗಿ ಚರ್ಚಿಸಿತು.

ಪ್ರಕಾಶ್ ರಾಜ್ ಅವರು SIR ಪ್ರಕ್ರಿಯೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳು ಹಾಗೂ ಸಾರ್ವಜನಿಕರಿಂದ ವ್ಯಕ್ತವಾಗಿರುವ ಆಕ್ಷೇಪಣೆಗಳ ಕುರಿತು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಈ ಪ್ರಕ್ರಿಯೆಯಿಂದ ಅಲ್ಪಸಂಖ್ಯಾತರು, ದಲಿತರು ಮತ್ತು ಆದಿವಾಸಿ ಸಮುದಾಯಗಳ ಅರ್ಹ ಮತದಾರರ ಹೆಸರುಗಳು ಪರಿಣಾಮಕ್ಕೊಳಗಾಗುವ ಸಾಧ್ಯತೆ ಕುರಿತು ನಿಯೋಗವು ಆತಂಕ ವ್ಯಕ್ತಪಡಿಸಿತು.

ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆ ಮತ್ತು ಪ್ರತಿಯೊಬ್ಬ ಅರ್ಹ ನಾಗರಿಕನ ಮತದಾನದ ಹಕ್ಕಿನ ರಕ್ಷಣೆ ಖಚಿತಪಡಿಸಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.

ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವೀರ ಸಂಗಯ್ಯ, ಎದ್ದೇಳು ಕರ್ನಾಟಕದ ಕೆ.ಎಲ್. ಅಶೋಕ್ ಹಾಗೂ ನೂರ್ ಶ್ರೀಧರ್ ಸೇರಿದಂತೆ ವಿವಿಧ ಸಾಮಾಜಿಕ ಸಂಘಟನೆಗಳು, ಜನಪರ ಚಳವಳಿಗಳು ಮತ್ತು ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.

SDPI ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಖಜಾಂಚಿ ಅಮ್ಜದ್ ಖಾನ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ತಾಹಿರ್, ಆಮ್ ಆದ್ಮಿ ಪಾರ್ಟಿಯ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಸೇರಿದಂತೆ ಹಲವು ಜನಪ್ರತಿನಿಧಿಗಳು, ಹೋರಾಟಗಾರರು ಹಾಗೂ ಜನಪರ ಚಳವಳಿಗಳ ನಾಯಕರು ಉಪಸ್ಥಿತರಿದ್ದರು.

ಕರ್ನಾಟಕದ SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳನ್ನು ಸಮಗ್ರವಾಗಿ ಪರಿಶೀಲಿಸಿ, ಅರ್ಹ ಮತದಾರರ ಹಕ್ಕುಗಳನ್ನು ರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಒತ್ತಾಯಿಸಿತು.

admin

Recent Posts

” چیف الیکشن کمشنر گیانیش کمار نے جمہوریت کا قتل کیا ہے؛

انہیں عوام اور جمہوری نظام کے سامنے جواب دہ ہونا ہوگا" عبد المجيد~ ریاستی صدر…

6 days ago

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 weeks ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

4 weeks ago